ನವದೆಹಲಿ : ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ಈ ಸಂದರ್ಭದಲ್ಲಿ ಭಾರತವು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿದೆ. ಲಸಿಕೆ ಉತ್ಪಾದನೆಯಲ್ಲಿ ವಿಶ್ವದ ಅತಿದೊಡ್ಡ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಸಾಂಕ್ರಾಮಿಕ ವಿಷಯದಲ್ಲಿ ಸಂಕಷ್ಟ ಅನುಭವಿಸುತ್ತಿದ್ದರೂ ಜಗತ್ತಿನ 150ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಕರೊನಾ ಕಾರಣದಿಂದ ಈ ಬಾರಿ ವಿಶ್ವ ಸಂಸ್ಥೆ ಸಾಮಾನ್ಯ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು. ವಿಡಿಯೋ ಕಾನ್ಫರೆನ್ಸ್ ಮೂಲಕವೇ ಮೋದಿ ಮಾತನಾಡಿ, ಇಡೀ ವಿಶ್ವವೇ ಕೊರೊನಾ ಸಂಕಷ್ಟದಲ್ಲಿದೆ. ವಿಶ್ವ ಸಂಸ್ಥೆ ಈ ಸಂದರ್ಭದಲ್ಲಿ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಭಾರತಕ್ಕೆ ಇನ್ನಷ್ಟು ಹೆಚ್ಚಿನ ಮಹತ್ವ ಸಿಗಬೇಕು ಎಂದು ಒತ್ತಾಯಿಸಿದರು.

ಇಡೀ ಜಗತ್ತಿಗೆ ಪೂರೈಕೆ ಮಾಡುವಷ್ಟು ಕೊವಿಡ್-19 ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯ ನಮಗಿದೆ. ಇಡೀ ಮನು ಕುಲವನ್ನು ಕರೊನಾದಿಂದ ಕಾಪಾಡುವ ನಿಟ್ಟಿನಲ್ಲಿ ನಮ್ಮ ದೇಶ ಹೋರಾಟ ನಡೆಸುತ್ತಿದೆ ಎಂದು ಮೋದಿ ಹೇಳಿದರು.

ಭಾರತ ಯಾವಾಗಲೂ ಮಾನವೀಯ ಹಿತಾಸಕ್ತಿಯ ಬಗ್ಗೆಯೇ ಯೋಚಿಸುತ್ತಿದೆ. ನಾವೆಲ್ಲ ಮೂರನೇ ಮಹಾಯುದ್ಧ ತಡೆದು ನಿಂತಿದ್ದೇವೆ. ಆದರೆ, ಭಯೋತ್ಪಾದನೆ ಇಂದು ಎಲ್ಲ ರಾಷ್ಟ್ರಗಳ ಶತೃವಾಗಿದೆ. ಜನರ ಒಳಿತಿನ ತತ್ವಗಳನ್ನು ಆಧರಿಸಿಯೇ ನಾವು ನೀತಿ ರೂಪಿಸುತ್ತೇವೆ ಹೊರತು ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಖಾಸಗಿ‌ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರು ತಮ್ಮ ಒಂದು ಅಥವಾ ಎರಡು ದಿನದ ಸಂಬಳವನ್ನು…

ಗದಗ ಜಿಲ್ಲೆಯಲ್ಲಿಂದು 99 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಕೂಡ 99 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ…

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…

Букмекерская контора «Мостбет» прекращает деятельность в РФ

Мостбет вывод средств в букмекерской конторе как вывести средства в БК Mostbet…