ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

gst karnataka siddaramyya

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಎಸ್ಟಿ ತೆರಿಗೆ ಹಣದ ಲೆಕ್ಕ ಕೇಳುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿದ್ರು.

ಬೆಂಗಳೂರು: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕೆಗಳಲ್ಲಿ ಈ ಕುರಿತು ವರದಿಯನ್ನು ಜಾಲತಾಣಗಳಲ್ಲಿ ಅವರು ಹಂಚಿಕೊಂಡಿದ್ದು, ಜಿಎಸ್ಟಿ  ಪರಿಹಾರ ನೀಡಲು ಸಂಗ್ರಹಿಸಲಾಗುವ ಸೆಸ್ ಮೊತ್ತವನ್ನು ಪ್ರತ್ಯೇಕ ಖಾತೆಯಲ್ಲಿ ಠೇವಣಿ ಮಾಡಬೇಕಾಗುತ್ತದೆ. ನಿರ್ದಿಷ್ಠ ವರ್ಷ ವ್ಯಯವಾಗದೆ ಉಳಿದಿರುವ ಹಣವನ್ನು ಮುಂದಿನ ವರ್ಷಕ್ಕೆ ವರ್ಗಾಯಿಸುವ ಅವಕಾಶ ಕೂಡಾ ಇದೆ. ಆದರೆ @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ನಿರ್ದಿಷ್ಟ ಉದ್ದೇಶಕ್ಕೆ ಸಂಗ್ರಹಿಸಲಾಗುವ ಸೆಸ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಕಾನೂನು ಉಲ್ಲಂಘನೆಯಾಗಿದೆ. ಆದರೆ @narendramodi  ಸರ್ಕಾರ ಜಿ ಎಸ್ ಟಿ ಪರಿಹಾರ ನಿಧಿಯ ಹಣವನ್ನು Consolidated fundಗೆ ವರ್ಗಾಯಿಸಿ ಜಿ ಎಸ್ ಟಿ ಕಾಯ್ದೆಯ ಉಲ್ಲಂಘನೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ್ಕೆ 2021ರ ಅಂತ್ಯಕ್ಕೆ ನೀಡಬೇಕಾಗಿರುವ  ಜಿ ಎಸ್ ಟಿ ಪರಿಹಾರ ರೂ. 30,000 ಕೋಟಿ. ಇದನ್ನು ನಿರಾಕರಿಸಿ, ಆರ್ಬಿಐ ನಿಂದ  ಸಾಲ ಎತ್ತಲು ಹೇಳಿರುವ @narendramodi ಸರ್ಕಾರ, ಜಿಎಸ್ಟಿ ಪರಿಹಾರಕ್ಕಾಗಿಯೇ ಸಂಗ್ರಹಿಸಿರುವ ಸೆಸ್ ದುಡ್ಡನ್ನು ತನ್ನ ಖಾಲಿ ಖಜಾನೆಯನ್ನು ತುಂಬಲು ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ಜಿ ಎಸ್ ಟಿ ಪರಿಹಾರಕ್ಕಾಗಿ 2017-18 ಮತ್ತು 2018-19ರಲ್ಲಿ ಕ್ರಮವಾಗಿ ರೂ. 56,146 ಕೋಟಿ ಮತ್ತು 54,275 ಕೋಟಿ ಸೆಸ್ ಹಣ ವರ್ಗಾವಣೆಯಾಗಿದೆ. ಉಳಿಕೆ ಸೆಸ್ ಮೊತ್ತವನ್ನು ದುರುಪಯೋಗ ಮಾಡಿಕೊಂಡಿರುವ @narendramodi  ಸರ್ಕಾರದ ಈ ಅಕ್ರಮದ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

@CMofKarnataka ಅವರೇ, ಅಧಿಕಾರಕ್ಕಿಂತ ರಾಜ್ಯದ ಹಿತ ರಕ್ಷಣೆ ಮುಖ್ಯ. ನಿಮಗೆ ರಾಜ್ಯದ ಜನತೆ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ನಮ್ಮ ಜನರ ತೆರಿಗೆ ಹಣದ ಪಾಲನ್ನು ಧೈರ್ಯದಿಂದ ಪ್ರಧಾನಿ @narendramodi ಬಳಿ ಕೇಳಿ. ನಿಮಗೆ ಧೈರ್ಯವಿಲ್ಲದೆ ಇದ್ದರೆ ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಎಂದು ಅವರು ಹೇಳಿದ್ದಾರೆ.

Exit mobile version