ಮುಳಗುಂದ : ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಳೆಯಿಂದ ಭರ್ತಿಯಾಗಿರುವ ಅಬ್ಬಿ ಕೆರೆ ವೀಕ್ಷಣೆ ಮಾಡಿದರು.

ನಂತರ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕೆರೆಗಳನ್ನು ಜನಪ್ರತಿನಿಧಿಗಳು, ಸಾರ್ವಜನಿಕರು ಕೆರೆ ಅಭಿವೃದ್ದಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ದಿಗೆ ಮುಂದಾಗಬೇಕು. ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ದಿಸುವುದರ ಜತೆಗೆ ರೈತರಿಗೂ ನೀರಿನ ಬವಣೆ ನೀಗಲಿದೆ. ಈಗಾಗಲೇ ಮಳೆಯಿಂದ ಕೆರೆಗಳು ಭರ್ತಿಯಾಗಿದ್ದು ಕೆರೆ ದಡದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಬೇಕು ಎಂದು ಸಲಹೆ ನೀಡಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಸ್ಥಳಿಯ ಪಟ್ಟಣ ಪಂಚಾಯ್ತಿಯ ಒಟ್ಟು 7 ಕರೆಗಳ ಪೈಕಿ 6 ಕೆರೆಗಳನ್ನ ಒತ್ತುವರಿ ತೆರವು ಮಾಡಿದ್ದು ಇನ್ನೂಳಿದ ಒಂದು ಕಂದಾಯ ಇಲಾಖೆಯ ಕೆರೆ ಸೇರಿ 2 ಕೆರೆಗಳ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ.

ಕೃಷಿ ಮತ್ತು ಕಂದಾಯ ಇಲಾಖೆಗಳು ಜಂಟಿಯಾಗಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿನ ಬೆಳೆಗಳ ಸಮೀಕ್ಷೆ ನಡೆಸಿದ್ದು ವರದಿ ನಂತರ ಸರ್ಕಾರಕ್ಕೆ ಸಲ್ಲಿಸಲಾಗುವದು. ಮತ್ತು ಮಳೆಯಿಂದ ಹಾನಿಗೇಡಾದ ಮನೆಗಳ ಸಮೀಕ್ಷೆ ನಡೆಸಿ ಎನ್‌ಡಿಆರ್ ಮಾರ್ಗಸೂಚಿ ಪ್ರಕಾರ ಪರಿಹಾರ ವಿತರಿಸುತ್ತೇವೆ. ತಾಲೂಕಿನಲ್ಲಿ ಮಳೆಯಿಂದ ರಸ್ತೆಗಳು ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ಲೋಕೋಪಯೋಗಿ ಇಲಾಖೆ ರಿಪೇರಿ ಕಾಮಗಾರಿಗೆ ಸೂಚಿಸಲಾಗಿದೆ. ಮಳೆ ಕಡಿಮೆಯಾದ ನಂತರ ಕಾಮಗಾರಿ ಕೈಗೊಳ್ಳಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ರುದ್ರೇಶ, ಎಪಿಎಂಸಿ ಅಧ್ಯಕ್ಷ ಸಿ.ಬಿ.ಬಡ್ನಿ, ಮುಖಂಡರಾದ ಬಸವರಾಜ ಸಂಕಾಪೂರ, ಪಟ್ಟಣ ಪಂಚಾಯ್ತಿ ಸದಸ್ಯರಾದ ವಿಜಯ ನೀಲಗುಂದ, ಎನ್.ಆರ್.ದೇಶಪಾಂಡೆ, ಕೆ.ಎಲ್.ಕರಿಗೌಡ್ರ, ಮಹಾಂತೇಶ ನೀಲಗುಂದ, ಎಸ್.ಸಿ.ಬಡ್ನಿ, ಬಸವರಾಜ ಹಾರೋಗೇರಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎಂ.ಎಸ್.ಬೆಂತೂರ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಬಿಎಸ್‌ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ

ಮಹಾಮಾರಿ ಕರೊನಾ ವೈರಸ್‌ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.

ಬೀದಿಬದಿ ವ್ಯಾಪಾರಸ್ಥರಿಗಾಗಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು

ಲಕ್ಷ್ಮೇಶ್ವರ: ಬೀದಿಬದಿ ವ್ಯಾಪಾರಸ್ಥರು ಕೊರೋನಾ ಪರಿಣಾಮದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಶೇಷ ಯೋಜನೆಗಳನ್ನು…

ಬೆಂಗಳೂರಿನತ್ತ ಮುಖ ಮಾಡಿದ ಜನರು!

ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ.…