ಅಬುಧಾಬಿ : ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಎರಡು ಸೋಲುಗಳನ್ನು ಕಾಣುತ್ತಿದ್ದಂತೆ ಕೋಚ್ ಗೆ ತಲೆನೋವು ಶುರುವಾಗಿದೆ. ಸುರೇಶ್ ರೈನಾ ಮತ್ತು ಅಂಬಾಟಿ ರಾಯುಡು ಅವರು ಅನುಪಸ್ಥಿತಿ ಕಾಡುತ್ತಿದೆ ಎಂದು ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ಧೋನಿ ನೇತೃತ್ವದ ತಂಡ ತೀವ್ರ ನಿರಾಸೆ ಪ್ರದರ್ಶಿಸುತ್ತಿದೆ. ಮೂರು ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವ ತಂಡ, ಮೊದಲ ಪಂದ್ಯ ಬಿಟ್ಟರೆ ಉಳಿದ ಎರಡು ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಹೀಗಾಗಿ ತಂಡದ ಬಗ್ಗೆ ಮಾತನಾಡಿದ್ದಾರೆ. 

ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ನಾವು ಕೀ ಪ್ಲೇಯರ್ಸ್ ಅನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಹೀಗಾಗಿ ಬ್ಯಾಲೆನ್ಸ್ ಮಾಡುವುದು ಕಷ್ಟವಾಗುತ್ತಿದೆ. ರೈನಾ, ರಾಯುಡು ಅವರು ಇಲ್ಲದೇ ಬ್ಯಾಟಿಂಗ್ ಕಷ್ಟವಾಗುತ್ತಿದೆ. ಈ ಮೂಲಕ ಟೂರ್ನಿಯ ಆರಂಭದಲ್ಲಿಯೇ ಬ್ಯಾಟಿಂಗ್ ಕ್ರಮವನ್ನು ಸಿದ್ಧ ಮಾಡಿಕೊಳ್ಳುತ್ತಿದ್ದೇವೆ ಎಂದು ಫ್ಲೆಮಿಂಗ್ ತಿಳಿಸಿದ್ದಾರೆ.

ಟಾಪ್ ಆರ್ಡರ್ ನಲ್ಲಿ ಒಳ್ಳೆಯ ಆಟಗಾರರು ಮಿಸ್ ಆಗಿದ್ದಾರೆ. ಹೀಗಾಗಿ ಲೈನ್ ಆಫ್ ಸರಿ ಹೊಂದುತ್ತಿಲ್ಲ. ಮುಂದಿನ ಪಂದ್ಯಕ್ಕೆ ಇನ್ನೂ ಆರು ದಿನ ಬಾಕಿಯಿದ್ದು, ನಾವು ಉತ್ತಮ ಆಟಗಾರರು ಮತ್ತು ತಂಡದೊಂದಿಗೆ ಮತ್ತ ಲಯ ಕಂಡುಕೊಳ್ಳಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. 

ಸುರೇಶ್ ರೈನಾ ಅವರು ವೈಯಕ್ತಿಕ ಕಾರಣದಿಂದ ಟೂರ್ನಿಯಿಂದ ಹೊರ ಹೋಗಿದ್ದರೆ, ಅಂಬಾಟಿ ರಾಯುಡು ಅವರು ಕೂಡ ಗಾಯದ ಸಮಸ್ಯೆಯಿಂದ ಪಂದ್ಯಗಳಿಂದ ದೂರ ಉಳಿದಿದ್ದಾರೆ. ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡ  ಟೂರ್ನಿಯಿಂದ ಹೊರ ಉಳಿದಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಬಂದ ಡೆಲ್ಲಿ ಕ್ಯಾಪಿಟಲ್ ತಂಡ ವು 20 ಓವರ್ ಗಳಲ್ಲಿ 175 ರನ್ ಟಾರ್ಗೆಟ್ ನೀಡಿತ್ತು. ಕೇವಲ 131 ಗಳಿಸಿ ಟೂರ್ನಿಯಲ್ಲಿ ಎರಡನೇ ಸೋಲನ್ನು ಚೆನ್ನೈ ಕಂಡಿತ್ತು. 

Leave a Reply

Your email address will not be published. Required fields are marked *

You May Also Like

ಹಸಿರು ಜೆರ್ಸಿ ತೊಟ್ಟಾಗ ಆರ್ ಸಿಬಿಯ ಸಾಧನೆ ಏನು?

ದುಬೈ : ಭಾರೀ ಆತ್ಮವಿಶ್ವಾಸದಲ್ಲಿ ಆರ್ ಸಿಬಿ ತಂಡ ಹಸಿರು ಜೆರ್ಸಿ ತೊಟ್ಟು, ಚೆನ್ನೈ ವಿರುದ್ಧ ನಡೆದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದಾರೆ.

ಪಂಜಾಬ್ ವಿರುದ್ಧ ಸುಲಭವಾಗಿ ಗೆಲ್ಲಬಹುದಾದ ತಂಡ ಕೈಬಿಟ್ಟಿದ್ದಕ್ಕೆ ನಾಯಕ ಹೇಳಿದ್ದೇನು?

ದುಬೈ : ಪಂಜಾಬ್ ವಿರುದ್ಧ ಸುಲಭವಾಗಿ ಗೆಲ್ಲಬೇಕಾದ ಪಂದ್ಯವನ್ನು ಹೈದ್ರಾಬಾದ್ ಕೈ ಚೆಲ್ಲಿದೆ. ಹೀಗಾಗಿ ಟೀಕೆಗಳು ವ್ಯಕ್ತವಾಗುತ್ತಿವೆ.

ಧೋನಿ ನಿವೃತ್ತಿ ಘೋಷಿಸುವ ಸಿದ್ಧತೆಯಲ್ಲಿದ್ದಾರೆಯೇ?

ಅಬುಧಾಬಿ : ಮ್ಯಾಚ್ ವಿನ್ನರ್ ಧೋನಿ ಐಪಿಎಲ್ ಗೂ ನಿವೃತ್ತಿ ಘೋಷಿಸಲಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ. ಹಾಗಂತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಆನ್ ಲೈನ್ ಜೂಜಿನಿಂದ ಯುವಕರ ಆತ್ಮಹತ್ಯೆ – ಗಂಗೂಲಿ, ಕೊಹ್ಲಿಗೆ ನೊಟೀಸ್!

ಚೆನ್ನೈ : ಆನ್ ಲೈನ್ ಜೂಜಾಟದಿಂದಾಗಿ ಸದ್ಯ ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾಂಬ್ಲಿಂಗ್ ಅನ್ನು ಉತ್ತೇಜಿಸುತ್ತಿರುವ ಜಾಹಿರಾತುಗಳಲ್ಲಿ ನಟಿಸಿರುವ ಸೆಲೆಬ್ರಿಟಿಗಳಿಗೆ ನೊಟೀಸ್ ನೀಡಲಾಗಿದೆ.