ರೈತರಿಂದ ರಾಜ್ಯ ಬಂದ್ ಗೆ ಕರೆ – ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ!

ಬೆಂಗಳೂರು : ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ  ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸೆ. 28ಕ್ಕೆ ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. 

ಸೋಮವಾರ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಗಳು ನಡೆಯಲಿದ್ದವು. ಸೆ. 28ರ ಬದಲಾಗಿ ಈ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ. ಈ ಬಂದ್ ಗೆ ರೈತ ಸಂಘಟನೆಗಳೊಂದಿಗೆ ಹಲವಾರು ಸಂಘಟನೆಗಳು ಕೂಡ ಕೈ ಜೋಡಿಸಿವೆ. 

ಬಂದ್ ಹಿನ್ನೆಲೆಯಲ್ಲಿ ರೈತ ಮುಖಂಡರ ಜೊತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಭೆ ನಡೆಸಿ ಸಂಧಾನ ಮಾಡಿಕೊಳ್ಳಲು ಪ್ರಯತ್ನಿಸಿದರು. ಆದರೆ, ಸಭೆಯಲ್ಲಿ ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರು ಬಂದ್ ಗೆ ಕರೆ ನೀಡಿದ್ದಾರೆ. ಹೀಗಾಗಿ ಸೆ. 28ರಂದು ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಯಾವುದೇ ಬದಲಾವಣೆಗೆ ಒಪ್ಪದ ಕಾರಣ, ರೈತರು ಬಂದ್ ಗೆ ಕರೆ ನೀಡಿದ್ದಾರೆ. 

Exit mobile version