ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ರಾಯಚೂರು, ಕಲಬುರಗಿ, ಬಾಗಲಕೋಟೆ, ಬೀದರ್, ವಿಜಯಪುರ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮಳೆರಾಯ ರಜೆ ಪಡೆಯದೆ ಸುರಿಯುತ್ತಿದ್ದಾನೆ. ರಸ್ತೆಗಳೆಲ್ಲ ನದಿಗಳಂತಾಗಿವೆ. ತಗ್ಗು ಪ್ರದೇಶದ ಮನೆಗಳೆಲ್ಲ ಜಲಾವೃತಗೊಂಡಿವೆ. ಬೆಂಬಡಿದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕಲಬುರಗಿಯಲ್ಲಂತೂ ಮಳೆಯಿಂದಾಗಿ ಜನರು ರೋಸಿ ಹೋಗಿದ್ದಾರೆ. ಭೀಮಾ ಹಾಗೂ ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿವೆ. ಈಗಾಗಲೇ ಹಲವರು ವಿವಿಧ ಮಳೆರಾಯನ ಅವಾಂತರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಭಾಗದಲ್ಲಿಯೂ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯ ಉದ್ದಕ್ಕೂ ಭಾರಿ ಪ್ರಮಾಣದ ನೀರು ಸಮುದ್ರ ಸೇರಿರುವುದರಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ಬೀದರ್ ನಲ್ಲಿ ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ಜೀವನದಿ ಮಾಂಜ್ರಾ ಉಕ್ಕಿ ಹರಿಯುತ್ತಿದೆ. ಲಕ್ಷಾಂತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಯಾದಗಿರಿ – ಸೇಡಂ ಮುಖ್ಯ ರಸ್ತೆ ಸಂಪರ್ಕ ಕಳೆದುಕೊಂಡಿದೆ. ಹೀಗಾಗಿ ಜನ ಜೀವ ಕೈಯಲ್ಲಿ ಹಿಡಿದು ಸಾಗುತ್ತಿದ್ದಾರೆ. ಬಾಗಲಕೋಟೆಯಲ್ಲಿ ಮಳೆಯ ಅವಾಂತರಕ್ಕೆ ವ್ಯಕ್ತಿಯೊಬ್ಬ ನೀರಿನಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಧಾರವಾಡ, ಬೆಳಗಾವಿಯಲ್ಲಿಯೂ ಕಳೆದ ಎರಡ್ಮೂರು ದನಗಳಿಂದ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಮುದ್ದೇಬಿಹಾಳ, ಬಸವನಬಾಗೇವಾಡಿ, ದೇವರಹಿಪ್ಪರಗಿ, ತಾಳಿಕೋಟಿ ಹಾಗೂ ಸಿಂದಗಿ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ಸಾವಿರಾರು ಹೆಕ್ಟೆರ್ ಬೆಳೆಗಳು ಜಲಾವೃತಗೊಂಡಿದೆ. ಡೋಣಿ ಮತ್ತು ಭೀಮಾ ನದಿ ಮತ್ತೆ ಉಕ್ಕಿ ಹರಿಯುತ್ತಿವೆ. ಸುಮಾರು 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.

Leave a Reply

Your email address will not be published. Required fields are marked *

You May Also Like

ಮುಂದಿನ ವಿಧಾನಸಭೆಗೆ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳೇ ಮೆಟ್ಟಿಲು ಎಂದು ಕರೆ ನೀಡಿರುವ ಬಿಜೆಪಿ!

ಮಂಗಳೂರು : ಬಿಜೆಪಿಯು ಮುಂಬರುವ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ಪಕ್ಷ ಸಂಘಟನೆಗೆ ಈಗಿನಿಂದಲೇ ಮುಂದಾಗಿದೆ.

ಪೋಲಿಸ್ ದಾಳಿ : ಕಲ್ಲುಗಣಿ ಸ್ಪೋಟಕ ವಸ್ತುಗಳು ವಶಕ್ಕೆ, ಓರ್ವನ ಬಂಧನ

ಮುಳಗುಂದ ಸಮೀಪದ ಶೀತಾಲಹರಿ ಗ್ರಾಮದ ಹೊರವಲಯದ ಶೆಡ್ಡವೊಂದರ ಮೇಲೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಸೇರಿದಂತೆ ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.

ಎಸ್.ಎಸ್‌.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳು ಇಚ್ಛಿಸಿದ ಕೇಂದ್ರದಲ್ಲಿ ಪರೀಕ್ಷೆಗೆ ಅವಕಾಶ

ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಬಿಜೆಪಿ ಸರಕಾರ ಬರಲು ಶ್ರಮಿಸಿ: ಮಾಜಿ ಶಾಸಕ‌ ಪ್ರತಾಪಗೌಡ ಕರೆ

ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌…