ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ರಾಯಚೂರು, ಕಲಬುರಗಿ, ಬಾಗಲಕೋಟೆ, ಬೀದರ್, ವಿಜಯಪುರ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮಳೆರಾಯ ರಜೆ ಪಡೆಯದೆ ಸುರಿಯುತ್ತಿದ್ದಾನೆ. ರಸ್ತೆಗಳೆಲ್ಲ ನದಿಗಳಂತಾಗಿವೆ. ತಗ್ಗು ಪ್ರದೇಶದ ಮನೆಗಳೆಲ್ಲ ಜಲಾವೃತಗೊಂಡಿವೆ. ಬೆಂಬಡಿದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕಲಬುರಗಿಯಲ್ಲಂತೂ ಮಳೆಯಿಂದಾಗಿ ಜನರು ರೋಸಿ ಹೋಗಿದ್ದಾರೆ. ಭೀಮಾ ಹಾಗೂ ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿವೆ. ಈಗಾಗಲೇ ಹಲವರು ವಿವಿಧ ಮಳೆರಾಯನ ಅವಾಂತರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಭಾಗದಲ್ಲಿಯೂ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯ ಉದ್ದಕ್ಕೂ ಭಾರಿ ಪ್ರಮಾಣದ ನೀರು ಸಮುದ್ರ ಸೇರಿರುವುದರಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ಬೀದರ್ ನಲ್ಲಿ ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ಜೀವನದಿ ಮಾಂಜ್ರಾ ಉಕ್ಕಿ ಹರಿಯುತ್ತಿದೆ. ಲಕ್ಷಾಂತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಯಾದಗಿರಿ – ಸೇಡಂ ಮುಖ್ಯ ರಸ್ತೆ ಸಂಪರ್ಕ ಕಳೆದುಕೊಂಡಿದೆ. ಹೀಗಾಗಿ ಜನ ಜೀವ ಕೈಯಲ್ಲಿ ಹಿಡಿದು ಸಾಗುತ್ತಿದ್ದಾರೆ. ಬಾಗಲಕೋಟೆಯಲ್ಲಿ ಮಳೆಯ ಅವಾಂತರಕ್ಕೆ ವ್ಯಕ್ತಿಯೊಬ್ಬ ನೀರಿನಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಧಾರವಾಡ, ಬೆಳಗಾವಿಯಲ್ಲಿಯೂ ಕಳೆದ ಎರಡ್ಮೂರು ದನಗಳಿಂದ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಮುದ್ದೇಬಿಹಾಳ, ಬಸವನಬಾಗೇವಾಡಿ, ದೇವರಹಿಪ್ಪರಗಿ, ತಾಳಿಕೋಟಿ ಹಾಗೂ ಸಿಂದಗಿ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ಸಾವಿರಾರು ಹೆಕ್ಟೆರ್ ಬೆಳೆಗಳು ಜಲಾವೃತಗೊಂಡಿದೆ. ಡೋಣಿ ಮತ್ತು ಭೀಮಾ ನದಿ ಮತ್ತೆ ಉಕ್ಕಿ ಹರಿಯುತ್ತಿವೆ. ಸುಮಾರು 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.

ರೈತರನ್ನು ರಾಸ್ಕಲ್ ಎಂದ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಮಾನ ಉಳಿಸಿಕೊಳ್ಳಿ: ಸಿದ್ದರಾಮಯ್ಯ

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಅವರು ತಕ್ಷಣ ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು

ಕಳಸಾ-ಬಂಡೂರಿ: ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ: ಹಣಕಾಸು ಅನುಮೋದನೆ ಯಾವಾಗ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟುನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…