ಬೆಂಗಳೂರು : ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಧೇಯಕ ವಿರೋಧಿಸಿ ರೈತ ಪರ ಸಂಘಟನೆಗಳು ನಾಳೆ ರಾಜ್ಯದಲ್ಲಿ ಬಂದ್ ಗೆ ಕರೆ ನೀಡಿವೆ. 

ಸರ್ಕಾರಕ್ಕೆ  ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ರೈತರು ಈ ಹೋರಾಟ ಕೈಗೊಂಡಿದ್ದಾರೆ. ರೈತರೊಂದಿಗೆ ವಿವಿಧ ಸಂಘಟನೆಗಳು ಕೂಡ ಕೈ ಜೋಡಿಸಿದ್ದರಿಂದಾಗಿ ನಾಳೆ ರಾಜ್ಯವು ಸಂಪೂರ್ಣವಾಗಿ ಬಂದ್ ಆಗಿರಲಿದೆ. 

ನಾಳೆ ಬಂದ್ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿ ಆದೇಶ  ಹೊರಡಿಸಿದೆ. ಆದರೆ, ಬಂದ್ ಸಂದರ್ಭದಲ್ಲಿ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಮಾತ್ರ ಕಾರ್ಯ ನಿರ್ವಹಿಸಲಿವೆ. ಹೊಟೇಲ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಸಾರಿಗೆ ಸಂಸ್ಥೆ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿವೆ. ಆದರೆ, ನಾಳೆಯ ಪರಿಸ್ಥಿತಿಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. 

ರೈತ ಪರ ಸಂಘಟನೆಗಳೊಂದಿಗೆ ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು, ನಾರಾಯಣಗೌಡರ ಕರವೇ ಸಂಘಟನೆ, ಪ್ರವೀಣ್ ಶೆಟ್ಟಿ ಕರವೇ ಬಣ, 25ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕದ ವಿವಿಧ ಸಂಘಟನೆಗಳು, ಮಹಾದಯಿ ಹೋರಾಟ ಸಂಘಟನೆ, ಓಲಾ, ಊಬರ್, ಕ್ಯಾಬ್, ಆಟೋ,ಟ್ಯಾಕ್ಸಿ ಅಸೋಸಿಯೇಶನ್, ಆಟೋ ಮಿತ್ರ, ಪೀಸ್ ಆಟೋ ಸಂಘಟನೆ, ಖಾಸಗಿ ಟೂರಿಸ್ಟ್ ಮತ್ತು ಟ್ಯಾಕ್ಸಿ ಮಾಲೀಕರ ಸಂಘಗಳು ಹೋರಾಟಕ್ಕೆ ಬೆಂಬಲ ನೀಡಿವೆ. ಹೀಗಾಗಿ ಹೋರಾಟ ನಾಳೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಳೆ ಓಲಾ – ಉಬರ್, ಆಟೋ – ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿರುವ ಕಾರಣಕ್ಕೆ ಈ ಸೇವೆಗಳು ಜನರಿಗೆ ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಆಗಿರಲಿವೆ. ಅಂಗಡಿ –ಮುಂಗಟ್ಟುಗಳು ಬಂದ್ ಆಗಿರಲಿವೆ. ಮಾಲ್ ಗಳು ತೆರೆದಿರುವುದಿಲ್ಲ. ಆದರೆ, ಕೈಗಾರಿಕೆಗಳು ಮಾತ್ರ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಿವೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

You May Also Like

ಹೋರಾಟದ ಹೆಸರಿನಲ್ಲಿ ಸ್ವಾರ್ಥತನ ಬೇಡ – ಸಂಸದೆ ಸುಮಲತಾ!

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಆಗ್ರಹಿಸಿ ರೈತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಪ್ರತಿಭಟನೆ…

ಮಾಜಿ ಸಚಿವ ವಿನಯ್ ಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು.

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿ: ನಮ್ಮೂರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ ಸಹಾಯದಿಂದ ಸ್ಥಳಿಯ ಪಪಂ ಹಾಗೂ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಅಭಿವೃದ್ದಿ ಸಮಿತಿ ಸಹಭಾಗಿತ್ವದಲ್ಲಿ ಪಟ್ಟಣಶೆಟ್ಟಿ ಕೆರೆ ಆವರಣದಲ್ಲಿ 246ನೇ ನಮ್ಮೂರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನ ಗ್ರಾಮಾಭಿವೃದ್ದಿ ಯೋಜನೆಯ ಹೈದರಬಾದ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ್ ಅವರು ಚಾಲನೆ ನೀಡಿದರು.

ಮಕ್ಕಳಿಗೆ ಹರಡುವ ಸಾಂಕ್ರಾಮಿಕ ರೋಗ ತಡೆಗೆ ಆಯುರ್ವೇದ ಔಷಧ ಬಳಸಿ

ಮುಳಗುಂದ : ಮಕ್ಕಳ ಮತ್ತು ಯುವಕರಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗ ತಡೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿ…