ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ತಾಳುತ್ತಿವೆ ಎಂದು ಆರೋಪಿಸಿ ನೀಡಲಾಗಿದ್ದ ಬಂದ್ ಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಕೂಡ ಶುರುವಾಗಿದೆ. ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಪ್ರತಿಭಟನಾಕಾರರು ಯತ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಸುಮಾರು 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕರವೇ ಮಹಿಳಾ ಕಾರ್ಯಕರ್ತೆಯರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು.  ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಿದ್ದಾರೆ. ಅಲ್ಲದೇ, ಹೋರಾಟಗಾರರು ಮೆಜೆಸ್ಟಿಕ್ ನಲ್ಲಿ ಪ್ರತಿಭಟನೆ ನಡೆಸಿ, ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಅವರನ್ನೂ ಕೂಡ ಪೊಲೀಸರು ಬಂಧಿಸಿದ್ದಾರೆ. ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ. ನಾರಾಯಣಗೌಡ ಸೇರಿದಂತೆ ಹಲವರನ್ನು ಈ ಸಂದರ್ಭದಲ್ಲಿ ಬಂಧಿಸಲಾಗಿದೆ. 

ಆದರೆ, ಬಂಧಿತ ಪ್ರತಿಭಟನಾಕಾರರು ಬಸ್ ನಿಂದ ಕೆಳಗೆ ಇಳಿದ ಮತ್ತೆ ಪ್ರತಿಭಟನೆ ನಡೆಸಿದ ಘಟನೆ ಆನಂದ್ ರಾವ್ ಫ್ಲೈ ಓವರ್ ಬಳಿ ನಡೆದಿದೆ. ಕಾರ್ಯಕರ್ತರನ್ನು ಮತ್ತೆ ಬಸ್ ನಲ್ಲಿ ಹಾಕಿ, ಪೊಲೀಸರು ಕಳುಹಿಸಿದ್ದಾರೆ. ಬೆಂಗಳೂರಿನ ಹಲವೆಡೆ ಈಗಾಗಲೇ ಹೋರಾಟ ಪ್ರಾರಂಭವಾಗಿದೆ. 

Leave a Reply

Your email address will not be published. Required fields are marked *

You May Also Like

ಜಿಪಂ ಅಧ್ಯಕ್ಷರಾಗಿ ಈರಪ್ಪ ಈಶ್ವರಪ್ಪ ನಾಡಗೌಡರ ಅವಿರೋಧ ಆಯ್ಕೆ

ರಾಜೀನಾಮೆಯಿಂದ ತೆರವಾದ ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಹುದ್ದೆಯ 5 ವರ್ಷದ ಬಾಕಿ ಉಳಿದ ಅವಧಿಗೆ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಮುಂಡರಗಿ ತಾಲ್ಲೂಕಿನ ಹಿರೇವಡ್ಡಟ್ಟಿ ಜಿ.ಪಂ ಕ್ಷೇತ್ರದ ಸದಸ್ಯರಾದ ಈರಪ್ಪ ಈಶ್ವರಪ್ಪ ನಾಡಗೌಡರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ

ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

2020-21 ರಿಂದ ಮುಂದಿನ ಐದು ವರ್ಷಗಳ ಅವಧಿಗೆ ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು!

ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಅಲ್ಲಿ ಮತ್ತೆ ನೆತ್ತರು ಹರಿದಿದೆ.

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.