ಬೆಂಗಳೂರು: ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳ ವಿರುದ್ಧ ಕರ್ನಾಟಕ ಬಂದ್ ಬೆಂಬಲಿಸಿ ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಬೀದಿಗೆ ಬರಲಾರರು ಎಂಬ ದುಷ್ಟ ಆಲೋಚನೆಯಿಂದ ಈ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದೀರಲ್ಲಾ? ಕಣ್ಣು ಬಿಟ್ಟು ರಾಜ್ಯದ ಬೀದಿಗಳನ್ನು ನೋಡಿ, ರೈತರು ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಬಂದಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ @BSYBJP ಅವರೇ, ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಹಾವೇರಿಯಲ್ಲಿ ರೈತರನ್ನು ಗುಂಡಿಟ್ಟು ಸಾಯಿಸಿದಿರಿ, ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದೀರಿ? ನೊಂದ ರೈತರ ಕಣ್ಣೀರ ಶಾಪ ನಿಮಗೆ ತಟ್ಟದೆ ಇರದು ಎಂದಿದ್ದಾರೆ.

ಕಾವೇರಿ-ಕೃಷ್ಣ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿದ್ದೀರಿ, ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದಿರಿ. ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರನ್ನು ಗೋಳುಹೊಯ್ಕೊಂಡಿರಿ. @BSYBJP ಅವರೇ, ನಿಮ್ಮ ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ? ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ? ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ @BSYBJP ಅವರೇ, ನೀವು ರೈತ ಸಮುದಾಯದ ಎದುರು ಬೆತ್ತಲಾಗಿದ್ದೀರಿ, ನೀವು ಹೊದ್ದುಕೊಂಡಿರುವ ಯಾವ ಹಸಿರು ಶಾಲು ಕೂಡಾ ನಿಮ್ಮ ಮಾನ ಮುಚ್ಚಲಾರದು. ನೀವು ನಿಜವಾಗಿಯೂ ರೈತರ ಪರವಾಗಿದ್ದರೆ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಜೊತೆ ನಿಂತುಕೊಳ್ಳಿ ಎಂದಿದ್ದಾರೆ.

ಮುಖ್ಯಮಂತ್ರಿ @BSYBJP ಅವರೇ,ದೇಶವನ್ನೇ ಕಾರ್ಪೋರೇಟ್ ಕುಳಗಳಿಗೆ ಮತ್ತು ರಿಯಲ್ ಎಸ್ಟೇಟ್ ಧಣಿಗಳಿಗೆ ಮಾರಾಟ ಮಾಡಲು ಹೊರಟಿರುವ ಮೋದಿಯವರ ತಾಳಕ್ಕೆ ನೀವು ಕುಣಿಯತೊಡಗಿದರೆ ವರ್ತಮಾನ ಮಾತ್ರವಲ್ಲ, ಇತಿಹಾಸವೂ ನಿಮ್ಮನ್ನು ಕ್ಷಮಿಸಲಾರದು. ಈಗಲೂ ಕಾಲ ಮಿಂಚಿಲ್ಲ, ಆತ್ಮಸಾಕ್ಷಿಗೆ ಕರೆಗೊಟ್ಟು ರೈತರ ಬೇಡಿಕೆ ಒಪ್ಪಿಕೊಳ್ಳಿ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಖಾಸಗಿ‌ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರು ತಮ್ಮ ಒಂದು ಅಥವಾ ಎರಡು ದಿನದ ಸಂಬಳವನ್ನು…

ಶಾಸಕ ಶರತ್ ಬಚ್ಚೇಗೌಡ ಕೈ ಸೇರಲು ಮುಹೂರ್ತ ಫಿಕ್ಸ್!

ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ವಿದ್ಯುತ್ ಸ್ಪರ್ಷ: ಯುವಕ ಸಾವು

ವಿದ್ಯುತ್ ಸ್ಪರ್ಷದಿಂದ ಯುವಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಕದಡಿ ಗ್ರಾಮದ ಬಸನಗೌಡ ರಾಮನಗೌಡ ಸಣಗೌಡ್ರ (25) ಸಾವನ್ನಪ್ಪಿದ ದುರ್ದೈವಿ.