ಹಾವೇರಿ: ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.

ಅಲ್ಲದೇ ಭೂ ಸುಧಾರಣಾ ಕಾಯಿದೆ ತೆಗೆಯುವ ಬಗ್ಗೆ ಕಾಂಗ್ರೆಸ್ ನ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದರು. ಅವರು ಹೇಳಿದಂತೆಯೇ ಈಗ ಕಾಯಿದೆಯನ್ನು ತಿದ್ದುಪಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರೇ 79 ಎ ಮತ್ತು ಬಿಯನ್ನು ಅನ್ನು ಕೈಬಿಡಬೇಕೆಂದು ವಿಧಾನಸಭೆಯಲ್ಲಿಯೇ ಹೇಳಿದ್ದರು. ಅದು ವಿಧಾನಸಭೆಯಲ್ಲಿ ದಾಖಲೆಯೂ ಆಗಿದೆ. ಆದರೆ ಈಗ ರಾಜಕೀಯ ದುರುದ್ದೇಶಕ್ಕಾಗಿ ವಿರೋಧಿಸುತ್ತಿದೆ. ಕಾಂಗ್ರೆಸ್ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಸಣ್ಣ ರೈತನಿಗೂ ಸಹ ಅನುಕೂಲವಾಗುವಂತೆ ಕೃಷಿಕಾಯಿದೆಗಳನ್ನು ತಂದಿದ್ದಾರೆ. ಆದರೆ ವಿನಾಕಾರಣ ರಾಜಕೀಯ ದುರುದ್ದೇಶಕ್ಕಾಗಿ ಇದನ್ನು ಕಾಂಗ್ರೆಸ್, ಜೆಡಿಎಸ್ ವಿರೋಧಿಸುತ್ತಿವೆ ಎಂದರು.

ಭೂ ಸುಧಾರಣೆ ಕಾಯಿದೆ ತಿದ್ದುಪಡಿಯಿಂದ ರಾಜ್ಯದಲ್ಲಿ ಪಾಳುಬಿದ್ದಿರುವ 30-40 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಯಲು ಸಾಧ್ಯವಾಗುತ್ತದೆ. ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ. ಇದರಿಂದ ಯುವಕರಿಗೆ ಉದ್ಯೋಗವಕಾಶಗಳು ಹೆಚ್ಚಾಗಲಿವೆ ಎಂದು ಬಿ.ಸಿ.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ಅಖಂಡ ಕರ್ನಾಟಕ ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಗಜೇಂದ್ರಗಡ ಹಾಗೂ ರೋಣ ತಾಲೂಕಾ ಗೊಲ್ಲ ಸಮಾಜ ಬಾಂಧವರು ಪಟ್ಟಣದ ತಹಶೀಲ್ದಾರ ಮೂಲಕ ಸೋಮವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮಕ್ಕಳಲ್ಲಿ ಕಲೆಗಳ ವ್ಯಾಮೋಹ ಮೂಡಿಸಿ: ಉಮೇಶ್ ಶಿರಹಟ್ಟಿಮಠ

ಉತ್ತರಪ್ರಭ ನಿಡಗುಂದಿ: ಪ್ರತಿಯೊಬ್ಬ ಮಗುವಿನಲ್ಲಿ ಒಂದಿಲ್ಲೊಂದು ರೀತಿಯ ಕಲಾ ಪ್ರತಿಭೆ ಹುದುಗಿರುತ್ತದೆ. ಅಂಥ ಪ್ರತಿಭೆಗಳನ್ನು ಗುರುತಿಸಿ…

ಲಾರಿಯಲ್ಲಿದ್ದ ಮಶೀನ್ ಗೆ ಬೆಂಕಿ

ಚಲಿಸುತ್ತಿದ್ದ ಲಾರಿಯಲ್ಲಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಲಕ್ಷ್ಮೇಶ್ವರದಲ್ಲಿ ಗೊಬ್ಬರ ಖರೀದಿಗಾಗಿ ಕ್ಯೂ..!

ಲಕ್ಷ್ಮೇಶ್ವರ: ಜಿಲ್ಲೆಯಾದ್ಯಂತ ಮುಂಗಾರು ಬಿತ್ತನೆ ಅಬ್ಬರ ಜೋರಾಗಿದೆ. ಮುಂಗಾರು ಹಂಗಾಮಿನ ಹತ್ತಿ, ಹೆಸರು, ಶೇಂಗಾ, ಗೋವಿನ ಜೋಳ ಬಿತ್ತನೆಗೆ ಬೀಜ, ಗೊಬ್ಬರ ಖರೀದಿಯಲ್ಲಿ ರೈತರು ತಲ್ಲೀನರಾಗಿದ್ದಾರೆ.