ಮಸ್ಕಿ: ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ಪ್ರತಾಪಗೌಡ ಪಾಟೀಲ ಅವರ 66ನೇ ಜನ್ಮ ದಿನ ನಿಮಿತ್ಯ ಅವರ ಅಭಿಮಾನಿ ಬಳಗದವರು ಪಟ್ಟಣದ ನರಸನಗೌಡ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರಕಾರದಿಂದ ಸಾಕಷ್ಟು ಅನುದಾನ ತಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಈ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಮತ್ತೊಮ್ಮೆ‌ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ. ಬೈ ಎಲೆಕ್ಷನ್ ನಲ್ಲಿ ಅವರು ಜಯಶಾಲಿಯಾದರೆ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಸಚಿವರಾದರೆ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ. ಸರಕಾರ ನಾನಾ ಯೋಜನೆಯನ್ನು ಸದ್ಬಳಕೆ ಮಾಡಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಾರೆ. ನಾವೆಲ್ಲರೂ ಅವರಿಗೆ ಕೈ ಜೋಡಿಸಬೇಕೆಂದು ಹೇಳಿದರು.

ಬಿಜೆಪಿ ಮುಖಂಡ‌ ಬಸನಗೌಡ ಪೊಲೀಸ್ ಪಾಟೀಲ , ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾಗಿದೆ.‌ ಅದನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸಬೇಕು ಎಂದರು.

ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಿರಲು ಕ್ರೀಡೆ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗಿಯಾಗಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಯಲ್ಲೋಜಿರಾವ್ ಕೊರೆಕರ್, ದೊಡ್ಡಪ್ಪ ಕಡಬೂರು, ಬಸ್ಸಪ್ಪ ಬ್ಯಾಳಿ, ರವಿಗೌಡ ಪಾಟೀಲ, ಪ್ರಸನ್ನ ಪಾಟೀಲ, ‌ವಿನಾಯಕ ಪಾಟೀಲ, ಸುರೇಶ ಹರಸೂರು, ಮಹಾಂತೇಶ ಪಾಟೀಲ ಗುಡದೂರು, ವಿರೂಪಾಕ್ಷಪ್ಪ ಎಸ್.ವಿ.ಟಿ ಸೇರಿದಂತೆ ಇನ್ನಿತರ ಮುಖಂಡರಿದ್ದರು.

Leave a Reply

Your email address will not be published. Required fields are marked *

You May Also Like

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಸಚಿವ ಸುಧಾಕರ್ ನೀಡಿದ ಮಾಹಿತಿ

ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ, ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ

ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಅತಿಥಿ ಉಪನ್ಯಾಸಕ ನೇಮಕಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ರಾಜಧಾನಿಯಲ್ಲಿ ಮತ್ತೆ ಇಬ್ಬರು ಗರ್ಭಿಣಿಯರಲ್ಲಿ ಕಂಡು ಬಂದ ಮಹಾಮಾರಿ!

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಮತ್ತೆ ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ಕಂಡು ಬಂದಿದೆ.