ಮಸ್ಕಿ: ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ಪ್ರತಾಪಗೌಡ ಪಾಟೀಲ ಅವರ 66ನೇ ಜನ್ಮ ದಿನ ನಿಮಿತ್ಯ ಅವರ ಅಭಿಮಾನಿ ಬಳಗದವರು ಪಟ್ಟಣದ ನರಸನಗೌಡ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರಕಾರದಿಂದ ಸಾಕಷ್ಟು ಅನುದಾನ ತಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಈ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಮತ್ತೊಮ್ಮೆ‌ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ. ಬೈ ಎಲೆಕ್ಷನ್ ನಲ್ಲಿ ಅವರು ಜಯಶಾಲಿಯಾದರೆ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಸಚಿವರಾದರೆ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ. ಸರಕಾರ ನಾನಾ ಯೋಜನೆಯನ್ನು ಸದ್ಬಳಕೆ ಮಾಡಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಾರೆ. ನಾವೆಲ್ಲರೂ ಅವರಿಗೆ ಕೈ ಜೋಡಿಸಬೇಕೆಂದು ಹೇಳಿದರು.

ಬಿಜೆಪಿ ಮುಖಂಡ‌ ಬಸನಗೌಡ ಪೊಲೀಸ್ ಪಾಟೀಲ , ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾಗಿದೆ.‌ ಅದನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸಬೇಕು ಎಂದರು.

ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಿರಲು ಕ್ರೀಡೆ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗಿಯಾಗಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಯಲ್ಲೋಜಿರಾವ್ ಕೊರೆಕರ್, ದೊಡ್ಡಪ್ಪ ಕಡಬೂರು, ಬಸ್ಸಪ್ಪ ಬ್ಯಾಳಿ, ರವಿಗೌಡ ಪಾಟೀಲ, ಪ್ರಸನ್ನ ಪಾಟೀಲ, ‌ವಿನಾಯಕ ಪಾಟೀಲ, ಸುರೇಶ ಹರಸೂರು, ಮಹಾಂತೇಶ ಪಾಟೀಲ ಗುಡದೂರು, ವಿರೂಪಾಕ್ಷಪ್ಪ ಎಸ್.ವಿ.ಟಿ ಸೇರಿದಂತೆ ಇನ್ನಿತರ ಮುಖಂಡರಿದ್ದರು.

Leave a Reply

Your email address will not be published. Required fields are marked *

You May Also Like

ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.

ಸಚಿವ ಸುಧಾಕರ್ ಗನ್ ಮ್ಯಾನ್, ಡ್ರೈವರ್ ನಡುವೆ ಮಾರಾಮಾರಿ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ.

ಶಾಸಕ ಶರತ್ ಬಚ್ಚೇಗೌಡ ಕೈ ಸೇರಲು ಮುಹೂರ್ತ ಫಿಕ್ಸ್!

ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಸೋಂಕಿನ ಮೂಲಗಳೇ ತಿಳಿಯುತ್ತಿಲ್ಲ! ರಾಜ್ಯದಲ್ಲಿ ಹೆಚ್ಚಿದೆ ಜನರಲ್ಲಿ ಕೊರೊನಾ ಆತಂಕ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೇಗ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆಯೂ…