ಗದಗ: ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಶಿರಹಟ್ಟಿ ಮತ್ತು ನರೇಗಲ್‌ದಲ್ಲಿ (ಅ.26), ಮುಂಡರಗಿ (ಅ.27),  ನರಗುಂದ (ಅ.28), ಹೊಳೆಆಲೂರು (ಅ.29),  ಕುರ್ತಕೋಟಿ (ಅ.30), ಗದಗ (ಅ.31) ರಂದು  ಬೆ.10 ರಿಂದ ಸಂಜೆ 5.30 ರವರೆಗೆ ಆಯ್ಕೆ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08372-220203 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.  

Leave a Reply

Your email address will not be published. Required fields are marked *

You May Also Like

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.

ರಾಹುಲ್ ಗಾಂಧಿ ಇಡಿ ವಿಚಾರಣೆ: ಜಿಲ್ಲಾಧಿಕಾರಿಗಳ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ..!

ಉತ್ತರಪ್ರಭಗದಗ: ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ…

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.