ಬೆಂಗಳೂರು: ರೈತರಿಗೆ ಸರಿಯಾಗಿ ವಿಮೆ ಪಾವತಿಸದ ಹಾಗೂ ಕೃಷಿ ಇಲಾಖೆಯ ಸಭೆಗಳಿಗೆ ಸರಿಯಾಗಿ ಹಾಜರಾಗಿ ಮಾಹಿತಿ ನೀಡದ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೃಷಿ ಸಚಿವರು ಶನಿವಾರ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸಂಬಂಧ ಕೃಷಿ ಇಲಾಖೆ ಅಧಿಕಾರಿಗಳು ಎನ್.ಐ.ಸಿ ಹಾಗೂ ವಿಮಾ ಕಂಪೆನಿಗಳ ಮುಖ್ಯಸ್ಥರ ಜೊತೆ ಪ್ರಗತಿಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಬಜಾಜ್ ಅಲೈಯನ್ಸ್, ಭಾರತಿ ಎಎಕ್ಸೆ, ಫ್ಯೂಚರ್ ಜೆನರಲ್, ಯುನಿವರ್ಸಲ್ ಸೋಂಪೋ ಹೆಚ್.ಡಿ.ಎಫ್.ಸಿ. ಸೇರಿದಂತೆ ಇನ್ನಿತರೆ ವಿಮಾ ಕಂಪೆನಿಗಳ ಮುಖ್ಯಸ್ಥರು ಭಾಗವಹಿಸಿ ಬೆಳೆ ವಿಮೆ ಸಂಬಂಧ ಮಾಹಿತಿ ಹಾಗೂ ರೈತರ ಬ್ಯಾಂಕ್ ಖಾತೆಯಲ್ಲಾಗಿರುವ ತಾಂತ್ರಿಕ ತೊಂದರೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು. ಆದರೆ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿಯಿಂದ ಯಾರೊಬ್ಬ ಪ್ರತಿನಿಧಿಯಾಗಲೀ ಮುಖಸ್ಥರಾಗಲೀ ಸಭೆಯಲ್ಲಿ ಭಾಗವಹಿಸರಲಿಲ್ಲ.ಅಲ್ಲದೇ ಸರಿಯಾದ ಮಾಹಿತಿಯನ್ನು ಕೂಡ ಇಲಾಖೆಗೆ ನೀಡದಿರುವುದನ್ನು ಗಮನಿಸಿದ ಕೃಷಿ ಸಚಿವರು, ಈ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ರೈತರಿಗೆ ಸರಿಯಾಗಿ ವಿಮೆ ಪಾವತಿಸಿಲ್ಲ.ಕೃಷಿ ಇಲಾಖೆ ನೀಡುವ ಸೂಚನೆಯನ್ನಾಗಲೀ ಸರ್ಕಾರದ ಆದೇಶವನ್ನಾಗಲೀ ಪಾಲಿಸದೇ ರೈತರಿಗೆ ವಿಮೆ ಪಾವತಿಸದೇ ವಿಳಂಬನೀತಿ ಅನುಸರಿಸಿರುವುದು ಕಂಡುಬಂದಿರುವುದರಿಂದ ಕಂಪೆನಿ ವಿರುದ್ಧ ನೊಟೀಸ್ ನೀಡಲಾಗುತ್ತಿದೆ. ಆ್ಯಂತೋನಿ ಎಂ‌.ಇ, ಅಪರ ಕೃಷಿ ನಿರ್ದೇಶಕರು

ಯಾವೊದೋ ಒಂದೆರಡು ಕಂಪೆನಿಗಳು ಮಾಡುವ ತಪ್ಪಿಗೆ ಇಲಾಖೆಗೆ ಕೆಟ್ಟಹೆಸರು ಬರುವಂತೆ ಆಗುತ್ತದೆ. ಅಲ್ಲದೇ ಇನ್ಸೂರೆನ್ಸ್ ಕಂಪೆನಿಗಳು ಪ್ರೀಮಿಯಮ್ ಕಟ್ಟಿಸಿಕೊಳ್ಳುವಾಗ ಷರತ್ತುಗಳನ್ನು ಸಡಿಲಿಸಿ ಕ್ಲೇಮ್ ಮಾಡುವಾಗ ಷರತ್ತುಗಳನ್ನು ಬಿಗಿಗೊಳಿಸುವುದು ಸರಿಯಲ್ಲ. ಇಲ್ಲಿಯವರೆಗೆ ರೈತರಿಗೆ ವಿಮಾ ಹಣವನ್ನು ನೀಡದೇ ಬಾಕಿ ಉಳಿಸಿಕೊಂಡಿರುವ ವಿಮಾ ಕಂಪೆನಿಗಳು ಆದಷ್ಟುಬೇಗ ಹಣವನ್ನು ರೈತರ ಖಾತೆಗೆ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ರೈತರ ಖಾತೆಗಳಲ್ಲಿ ಏನಾದರೂ ತಾಂತ್ರಿಕ ತೊಂದರೆಗಳಾಗಿದ್ದರೆ ಅವುಗಳನ್ನು ರೈತರ ಗಮನಕ್ಕೂ ಹಾಗೂ ಇಲಾಖೆಯ ಗಮನಕ್ಕೂ ತಂದು ಸರಿಪಡಿಸಬೇಕು. ವಿಮಾ ಕಂಪೆನಿಗಳಿಗೆ ಸರಿಯಾಗಿ ಕಂತು ಪಾವತಿಸಿದ ಯಾವುದೇ ರೈತರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.

50 ಸಾವಿರಕ್ಕೂ ಮೇಲ್ಪಟ್ಟ ಹಣ ರೈತರ ಖಾತೆಗೆ ಜಮೆ ಮಾಡಲು ಆರ್.ಬಿ.ಐ ನಿಯಮಾವಳಿ ಪ್ರಕಾರ ಕೆಲವು ಬ್ಯಾಂಕ್ ಗಳ ಖಾತೆಗಳಿಗೆ ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಕೇಂದ್ರದ ಗಮನಕ್ಕೆ ತರುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಹೇಳಿದರು.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್, ಅಪರ ಕೃಷಿ ನಿರ್ದೇಶಕ ಅಂತೋನಿ ಇಮ್ಯಾನ್ಯುಯಲ್ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಭಾಗವಹಿಸಿದ್ದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ: ಕೆಲವು ಬ್ಯಾಂಕುಗಳ ವಿಲೀಕರಣವಾಗಿರುವುದರಿಂದ ಬ್ಯಾಂಕ್ ಗಳ ಐಎಫ್ ಸಿ ಕೋಡ್ ಬದಲಾವಣೆಯಾಗಿರುತ್ತದೆ.ಆದ್ದರಿಂದ ರೈತರು ಆದಷ್ಟು ಬೇಗ ತಮ್ಮ ಬ್ಯಾಂಕ್ ಖಾತೆಗೆ ಸರಿಯಾದ ಆಧಾರ್ ಸಂಖ್ಯೆ ಐಎಫ್ ಸಿ ಸಂಖ್ಯೆ, ಖಾತೆ ಸಂಖ್ಯೆ ಸರಿಯಾಗಿದೆಯೇ ಎಂಬುದನ್ನು ಪರೀಕ್ಷಿಸಿಕೊಂಡು ಕೃಷಿ ಇಲಾಖೆಯ ಗಮನಕ್ಕೆ ತರುವಂತೆ ಕೃಷಿ ಸಚಿವರು ರೈತ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…

ಕೊರೊನಾ ಎಫೆಕ್ಟ್ – ಹೊಲದಲ್ಲಿ ಬೆಳೆದ ಎಲೆಕೋಸನ್ನು ನಾಶ ಮಾಡಿದ ರೈತ!

ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು…

ಮುಳಗುಂದ: ಅತಿವೃಷ್ಟಿ ಜಮೀನಿಗಳಿಗೆ ಕೃಷಿ ಅಧಿಕಾರಿ ಭೇಟಿ

ಮುಳಗುಂದ : ಪಟ್ಟಣ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿಯಿಂದ ಉಂಟಾಗಿ ಬೆಳೆ ಹಾನಿ ಜತೆಗೆ ನೂರಾರು ಎಕರೆ ಹೊಲಗಳ ಬದವು ಕೊಚ್ಚಿಕೊಂಡು ಹೋಗಿದ್ದ ಹೊಲಗಳಿಗೆ ಗದಗ ತಾಲೂಕ ಕೃಷಿ ಸಹಾಯಕ ಅಧಿಕಾರಿ ಮಲ್ಲಯ್ಯ ಕೊರವನವರ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಂಪುರಾಜನಿಗೆ ಡಿಮ್ಯಾಂಡಪ್ಪೂ..ಡಿಮ್ಯಾಂಡು! ಬೆಳೆ ಇತ್ತು ಬೆಲೆ ಇರಲಿಲ್ಲ, ಈಗ ಬೆಳೆ ಇಲ್ಲ ಬೆಲೆ ಇದೆ…!

ಸುರೇಶ್ ಎಸ್.ಲಮಾಣಿ ಲಕ್ಷ್ಮೇಶ್ವರ: ಅತಿವೃಷ್ಟಿ ಮತ್ತು ಅನಾವೃಷ್ಟಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಜೀವನದುದ್ದಕ್ಕೂ ಕಂಬದ ಪೆಟ್ಟು…