ನಾಗ್ಪುರ : ಅತ್ಯಾಚಾರಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 800 ಕಿ.ಮೀ ಪ್ರಯಾಣಿಸಿ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಲಖನೌದಿಂದ ಮಹಾರಾಷ್ಟ್ರದ ನಾಗ್ಪುರಕ್ಕೆ ಪ್ರಯಾಣಿಸಿ ಈ ಮಹಿಲೆ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ರಾಜಧಾನಿ ಲಖನೌನದಲ್ಲಿಯೇ ನನ್ನ ಮೇಲ ಅತ್ಯಾಚಾರ ನಡೆದಿದೆ ಎಂದು ನೇಪಾಳಿ ಮಹಿಳೆ ಆರೋಪಿಸಿದ್ದಾರೆ.

ಅತ್ಯಾಚಾರ ನಡೆಸಿದ ನಂತರ ಪೊಲೀಸರ ಬಳಿ ಹೋದರೆ, ನನ್ನನ್ನು ಕೊಂದು ಹಾಕುತ್ತೇನೆ ಎಂದು ಆ ವ್ಯಕ್ತಿ ಹೆದರಿಸಿದ್ದರಿಂದಾಗಿ ಇಲ್ಲಿಗೆ ಬಂದು ದೂರು ನೀಡುತ್ತಿದ್ದೇನೆ. ಎಂಜನೀಯರ್ ಆಗಿರುವ ಪ್ರವೀಣ್‌ ರಾಜ್‌ಪಾಲ್‌ ಯಾದವ್‌ ಎಂಬ ವ್ಯಕ್ತಿ ಮಾರ್ಚ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದ. ಡ್ರಗ್ಸ್ ನೀಡಿ ಈ ಕೃತ್ಯ ಎಸಗಿದ್ದಾನೆ. ಸ್ನೇಹಿತನ ಸಹಾಯದಿಂದ ನಾನು ಇಲ್ಲಿಯವರೆಗೂ ಬಂದಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.

ಈ ಕುರಿತು ಪೊಲೀಸರು ಶೂನ್ಯ ಎಫ್ ಐಆರ್ ದಾಖಲಿಸಿದ್ದಾರೆ. ದೇಶದ ಯಾವುದೇ ಪೊಲೀಸ್‌ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲು ಅವಕಾಶವಿರುವ ವ್ಯವಸ್ಥೆಗೆ ಶೂನ್ಯ ಎಫ್ ಐಆರ್ ಎನ್ನುತ್ತಾರೆ.

Leave a Reply

Your email address will not be published. Required fields are marked *

You May Also Like

ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.

ಲಡಾಕ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ತಲುಪಿದ ಪರಿಸ್ಥಿತಿ!

ನವದೆಹಲಿ: ಲಡಾಕ್ ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.ಚೀನಾ ದೇಶದ ಸೇನೆಯೊಂದಿಗೆ ಗಡಿಯಲ್ಲಿ ಸೇನೆಯ ನಿಲುಗಡೆ ಮತ್ತು ಅಲ್ಲಿನ…

ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ!

ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಮೋದಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್!

ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.