ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ.

ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರ ರಾಜ್ಯ ಮಹಾಮಾರಿಗೆ ಹೆಚ್ಚು ಪೆಟ್ಟು ತಿನ್ನುತ್ತಿದೆ. ಉಳಿದಂತೆ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶ ರಾಜ್ಯಗಳಿವೆ. ಮಹಾರಾಷ್ಟ್ರ (14,65,911), ಆಂಧ್ರ ಪ್ರದೇಶ (7,29,307), ಕರ್ನಾಟಕ (6,57,705), ತಮಿಳುನಾಡು(6,30,408) ಮತ್ತು ಉತ್ತರ ಪ್ರದೇಶ (4,20,937) ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ ಮಹಾಮಾರಿಗೆ 38,717 ಜನರು ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67 ಲಕ್ಷದ ಗಡಿ ದಾಟಿದೆ. ಅಲ್ಲದೇ, ಈ ಮಾಹಾಮಾರಿಗೆ ಒಂದೇ ದಿನ 986 ಜನರು ಬಲಿಯಾಗಿದ್ದಾರೆ. ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿ ಮುಂದುವರೆದಿದೆ. ಪ್ರಾರಂಭದಿಂದಲೂ ಕೊರೊನಾ ಹೊಡೆತಕ್ಕೆ ಸಿಲುಕಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ ಕಾಣುತ್ತಿಲ್ಲ. ಅಲ್ಲಿನ ಸೋಂಕಿತರ ಸಂಖ್ಯೆ 74,97,847ಕ್ಕೆ ಏರಿಕೆ ಕಂಡಿದೆ. ಅಮೆರಿಕದಲ್ಲಿ 43,34,605 ಸಕ್ರಿಯ ಪ್ರಕರಣಗಳಿದ್ದು, 2,10,852 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಆದರೆ, ನೆಮ್ಮದಿಯ ಸಂಗತಿ ಎಂದರೆ ಈ ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಸಿದ್ಧವಾಗಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಒಂದು ವೇಳೆ ಔಷಧಿ ಸಿಕ್ಕರೆ, ಅಮೆರಿಕ, ಭಾರತ, ಬ್ರೆಜಿಲ್, ರಷ್ಯಾ, ಸ್ಪೇನ್, ಪೆರು, ಬ್ರಿಟನ್ ಸೇರಿದಂತೆ ಕೊರೊನಾ ಹೊಡೆತಕ್ಕೆ ತೀವ್ರವಾಗಿ ಬಲಿಯಾಗಿರುವ ರಾಷ್ಟ್ರಗಳಲ್ಲಿನ ಜನರು ನೆಮ್ಮದಿಯ ಉಸಿರು ಬಿಡಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್

ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಯೊಂದು ಭಾರೀ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಇಂಡೋ-ನೇಪಾಳ ಕ್ರಿಕೆಟ್ ಟ್ರೋಫಿ “ನಿಡಗುಂದಿ ತಂಡಕ್ಕೆ ಚಿನ್ನದ ಪದಕ”

ಉತ್ತರಪ್ರಭ ಸುದ್ದಿ ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್…

ಕೋಲಾರದ ಸುತ್ತಮುತ್ತ ಆವರಿಸಿದೆ ಕೊರೊನಾ!

ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲಿ ಕೂಡ ಕೊರೊನಾ ಭಯ ಕಾಡುತ್ತಿದೆ.

ಸರ್ಕಾರಗಳ ಸಾಧನೆ ಮನೆ-ಮನೆಗೆ ತಲುಪಿಸಿ- ಲಿಂಗರಾಜ ಪಾಟೀಲ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮನೆ-ಮನೆಗೆ ತಲುಪಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಧಾರವಾಡ ವಿಭಾಗೀಯ ಬಿಜೆಪಿ ಸಂಘಟನಾ ಪ್ರಭಾರಿ ಲಿಂಗರಾಜ್ ಪಾಟೀಲ್ ಹೇಳಿದರು.