ಲಕ್ನೋ : ಹತ್ರಾಸ್ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಂದು ಆಘಾತಕಾರಿ ಸಂಗತಿ ಹೊರ ಹಾಕಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿಯಾಗಿದ್ದಾನೆ. ಆದರೆ, ಈ ವ್ಯಕ್ತಿಯೊಂದಿಗೆ ಬಾಲಕಿ ನಿರಂತರ ಸಂಪರ್ಕದಲ್ಲಿ ಇದ್ದಳು ಎಂದು ಪೊಲೀಸರಿಗೆ ತನಿಖೆಯ ವೇಳೆ ತಿಳಿದು ಬಂದಿದೆ. ತನಿಖೆ ಕೈಗೊಂಡಿದ್ದ ಪೊಲೀಸರು, ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ನ ಫೋನ್ ಟ್ರ್ಯಾಕ್ ಮಾಡಿದ್ದರು.

ಸಂತ್ರಸ್ತೆಯ ಮೇಲಿನ ಅತ್ಯಾಚಾರದ ಪ್ರಮುಖ ಆರೋಪಿಯಾಗಿರುವ 19 ವರ್ಷದ ಬಾಲಕನೊಂದಿಗೆ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಉತ್ತರಪ್ರದೇಶದ ಪೊಲೀಸರು ತಿಳಿಸಿದ್ದಾರೆ. ಆರೋಪಿಯು, ಯುವತಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಹೆಸರಿನಲ್ಲಿ ಸಂದೀಪ್ ಗೆ ಒಂದೇ ನಂಬರ್ ನಿಂದ ನಿರಂತರವಾಗಿ ಫೋನ್ ಕರೆಗಳು ಬರುತ್ತಿದ್ದವು. 2019 ರಿಂದ ಈ ನಂಬರ್ ಗಳು ಬಂದಿವೆ ಎಂದು ತಿಳಿದು ಬಂದಿದೆ.

ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಚಂದಪಾ ಪ್ರದೇಶದಲ್ಲಿನ ಸೆಲ್ ಟವರ್ ಗಳಿಂದ ಹೆಚ್ಚಿನ ಕರೆಗಳು ಬಂದಿವೆ. ಎರಡು ನಂಬರ್ ಗಳಿಂದ 62 ಹೊರ ಕರೆ ಹಾಗೂ 42 ಒಳ ಕರೆಗಳು ಬಂದಿವೆ. ಒಟ್ಟು 104 ಬಾರಿ ಸಂಪರ್ಕ ಈ ನಂಬರ್ ಗಳಿಂದ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ, ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ನಾಲ್ವರು ಪಾಪಿಗಳು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ನಾಲಿಗೆ ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಈ ಘಟನೆಗೆ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸಿತ್ತು. ಘಟನೆ ನಡೆದು ಎರಡು ವಾರಗಳ ನಂತರ ಬಾಲಕಿ ಸಾವನ್ನಪ್ಪಿದ್ದಳು.

Leave a Reply

Your email address will not be published. Required fields are marked *

You May Also Like

ರಷ್ಯಾ ಲಸಿಕೆ ಹೊರಬರಲು ಸಾಕಷ್ಟು ಸಮಯ ಬೇಕು

ಮಾಸ್ಕೋದ ಸೆಚೆನೆವ್ ವಿವಿಯ ಪ್ರಕಟಣೆ ಆಧರಿಸಿ ಬಂದಿರುವ ವರದಿಗಳ ಪ್ರಕಾರ, ವಿಶ್ವದ ಮೊದಲ ಕೋರೊನಾ ಲಸಿಕೆ…

ರೈಲು ಹಳಿ ದುರಂತ: 16 ಸಾವು

ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು…

ಅಬುದಾಬಿಯಿಂದ ರಾಜ್ಯಕ್ಕೆ ಬಂದ 179 ಜನ – ಬೆಂಗಳೂರಿಗರಲ್ಲಿ ಆತಂಕ!

ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.

ಕೋವಿಡ್ ಬಲಿ: ಹೈದರಾಬಾದ್ ನಲ್ಲಿ ವೈದ್ಯರ ಮೇಲೆ ದಾಳಿ

ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ…