ನವದೆಹಲಿ :  ದೇಶದಲ್ಲಿ ಆರಂಭದಲ್ಲಿ ಕೊರೊನಾ ಅಟ್ಟಾಹಸವನ್ನು ಕಟ್ಟಿ  ಹಾಕಿದ್ದರೂ ಆ ನಂತರ ಅದು ತನ್ನ ವ್ಯಾಪ್ತಿ ಮೀರುತ್ತಿದೆ. ಹೀಗಾಗಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆ ಕಾಣುತ್ತಿದೆ. ಇಲ್ಲಿಯವರೆಗೂ ಸರ್ಕಾರದ ಅಂಕಿ – ಸಂಖ್ಯೆಗಳಂತೆ ಒಂದು ಲಕ್ಷಕ್ಕೂ ಅಧಿಕ ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಪೈಕಿ ದೇಶದ 25 ಜಿಲ್ಲೆಗಳಲ್ಲಿಯೇ ಅತಿ ಹೆಚ್ಚಿನ ಸಾವು – ನೋವುಗಳಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದಾಖಲಾದ ಕೊರೊನಾ ಸಾವಿನ ಪೈಕಿ 8 ರಾಜ್ಯಗಳ 25 ಜಿಲ್ಲೆಗಳಲ್ಲಿಯೇ ಶೇ. 48ರಷ್ಟು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್, ಕೊರೊನಾ ಸಾವುಗಳ ಪೈಕಿ 8 ರಾಜ್ಯಗಳ 25 ಜಿಲ್ಲೆಗಳಲ್ಲಿಯೇ ಶೇ.48ರಷ್ಟು ಸಾವು ಸಂಭವಿಸಿದೆ. ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಗುಜರಾತ್, ಉತ್ತರ ಪ್ರದೇಶ ಹಾಗೂ ಪಂಜಾಬ್ ರಾಜ್ಯಗಳಲ್ಲಿಯೇ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

ಈ ಪೈಕಿ ಮಹಾರಾಷ್ಟ್ರದಲ್ಲಿಯೇ 15 ಜಿಲ್ಲೆಗಳು ಇವೆ. ಇನ್ನುಳಿದಂತೆ ಕರ್ನಾಟಕ, ಪಶ್ಚಿಮ ಬಂಗಾಳ, ಗುಜರಾತ್ ನ ತಲಾ 2 ಜಿಲ್ಲೆಗಳು, ತಮಿಳುನಾಡು, ಪಂಜಾಬ್, ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದ ತಲಾ 1 ಜಿಲ್ಲೆಗಳು ಇವೆ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೇ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ದೇಶದ ಒಟ್ಟಾರೆ ಸೋಂಕಿತರ ಪೈಕಿ ಶೇ. 77ರಷ್ಟು ಸೋಂಕಿತರಿದ್ದಾರೆ. 

Leave a Reply

Your email address will not be published. Required fields are marked *

You May Also Like

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ರಾಜ್ಯದಲ್ಲಿನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ!

ನವದೆಹಲಿ : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಯಾಗಿ ಜಯ ಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಅಬ್ಬಾ…! ಮಹಾರಾಷ್ಟ್ರದಲ್ಲಿ ಎಷ್ಟು ಜನ ಪೊಲೀಸರಿಗೆ ಕೊರೊನಾ ಬಂದಿದೆ ಗೊತ್ತಾ?

ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು…

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.