ಹೈದರಾಬಾದ್ : ನಟ ಮಹೇಶ್ ಬಾಬು ಹಾಗೂ ಸ್ವೀಟಿ ಅನುಷ್ಕಾ ಶೆಟ್ಟಿ ಅವರಿಗೆ ಇಂದು ವಿಶೇಷ ದಿನವಂತೆ. ಈ ನಿಟ್ಟಿನಲ್ಲಿ ಇಬ್ಬರೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಈ ಇಬ್ಬರೂ ಸೆಲೆಬ್ರಿಟಿಗಳು ಅಭಿನಯಿಸಿದ ಸೂಪರ್ ಹಿಟ್ ಖಲೇಜಾ ಸಿನಿಮಾ ಇಂದು ಬಿಡುಗಡೆಯಾಗಿತ್ತು. ಅದು ಬಿಡುಗಡೆಯಾಗಿ ಇಂದಿಗೆ 10 ವರ್ಷಗಳು ಕಳೆದಿವೆ. ಅದು ಸೂಪರ್ ಹಿಟ್ ಆಗಿ, ಅಭಿಮಾನಿಗಳ ಮನ ಗೆದ್ದಿತ್ತು. ಈಗ ಇಬ್ಬರೂ ಜೊತೆಗೂಡಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಇಬ್ಬರ ಕಾಂಬಿನೇಷನ್‍ ಗೆ ಆಗಿನಿಂದಲೂ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈ ಸಿನಿಮಾವನ್ನು ಅಭಿಮಾನಿಗಳು ತುಂಬಾ ಮೆಚ್ಚಿಕೊಂಡಿದ್ದರು. ಖಲೇಜಾ ಸಿನಿಮಾಗೆ ತ್ರಿವಿಕ್ರಮ್ ಆಕ್ಷನ್ ಕಟ್ ಹೇಳಿದ್ದರು. ಈಗ ಈ ಚಿತ್ರ 10 ವರ್ಷಗಳನ್ನು ಪೂರೈಸುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಹೇಶ್ ಬಾಬು, ಖಲೇಜಾ ಸಿನಿಮಾ ಬಿಡುಗಡೆಯಾಗಿ 10 ವರ್ಷ ಪೂರೈಸಿದೆ. ನಟನಾಗಿ ನನ್ನನ್ನು ಮರುಶೋಧಿಸಿದ ಸಿನಿಮಾ ಇದು. ಹೀಗಾಗಿ ಈ ಚಿತ್ರ ವಿಶೇಷವಾಗಿ ನನ್ನ ಮನದಲ್ಲಿ ಉಳಿಯುತ್ತದೆ. ನನ್ನ ಸ್ನೇಹಿತ ಮತ್ತು ನಿರ್ದೇಶಕ ತ್ರಿವಿಕ್ರಮ್ಗೆದ ಧನ್ಯವಾದಗಳು. ಮುಂದಿನ ಸಿನಿಮಾಗಾಗಿ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ನಟಿ ಅನುಷ್ಕಾ ಶೆಟ್ಟಿ ಕೂಡ ಮಹೇಶ್ ಬಾಬು ಟ್ವೀಟ್ಗೆು ಪ್ರತಿಕ್ರಿಯೆ ನೀಡಿದ್ದು, ಈ ಸಿನಿಮಾದ ಸಾಕಷ್ಟು ನೆನಪುಗಳಿವೆ. ಮಹೇಶ್ ಬಾಬು, ತ್ರಿವಿಕ್ರಮ್ ಅವರಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಡ್ರಗ್ಗಿಣಿಯರಿಗೆ ಇಂದು ಸಿಗಲಿಲ್ಲ ಬೇಲ್! ಕಾರಣವೇನು ಗೊತ್ತಾ?

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಜಾಗೊಂಡಿದೆ.

ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ

ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..

ನನ್ನ ಮನೆಯನ್ನು ದೇವರೇ ಕಾಪಾಡಬೇಕೆಂದು ನಟ ರವಿಶಂಕರ್ ಹೇಳಿದ್ಯಾಕೆ..?

ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.…

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.