ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಇಂದು ವಿಧಿವಶರಾಗಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಕುರಿತು ಅವರ ಪುತ್ರ ಚಿರಾಗ್ ಮಾಹಿತಿ ಹಂಚಿಕೊಂಡಿದ್ದಾರೆ. ರಾಮ್ ವಿಲಾಸ್ ಅವರು ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕರು. ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು.

ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

You May Also Like

ರಾಮ ಮಂದಿರ: 2 ಸಾವಿರ ಅಡಿ ಕೆಳಗೆ ಇಡಲಾಗುತ್ತಿರುವ ‘ಟೈಮ್ ಕ್ಯಾಪ್ಸುಲ್’ನಲ್ಲಿ ಏನಿರುತ್ತೆ?

ದೇಶದಲ್ಲಿ ರಾಮಜನ್ಮಭೂಮಿ ವಿವಾದಕ್ಕೆ ಕಳೆದ ವರ್ಷ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ಒಂದು ‘ಅಂತಿಮ’ ಪರಿಹಾರ ನೀಡಿದ ನಂತರ, ಅಲ್ಲಿ ರಾಮ ಮಂದಿರ ನಿರ್ಮಿಸುವ ಕೆಲಸಕ್ಕೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿಗೆ ಉಸ್ತುವಾರಿ ನೀಡಲಾಗಿದೆ.

ದಿಗ್ವಿಜಯ್ ಸಿಂಗ್ ನಕಲಿ ಟ್ವೀಟರ್ ರಚನೆ: ದೂರು ನೀಡಿದ ಕೈ ನಾಯಕ

ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಹೆಸರಿನಲ್ಲಿ ನಕಲಿ ಟ್ವೀಟರ್…

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…