ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಇಂದು ವಿಧಿವಶರಾಗಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಕುರಿತು ಅವರ ಪುತ್ರ ಚಿರಾಗ್ ಮಾಹಿತಿ ಹಂಚಿಕೊಂಡಿದ್ದಾರೆ. ರಾಮ್ ವಿಲಾಸ್ ಅವರು ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕರು. ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು.

ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

You May Also Like

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…

ಕೊರೊನಾ ಬಲಿ: ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

ನ್ಯೂಯಾರ್ಕ್: ಜಾಗತಿಕ ಮಟ್ಟದಲ್ಲಿ ಕೊರೊನಾ ಭಾರೀ ವಿನಾಶಕ್ಕೆ ಕಾರಣವಾಗಿದೆ. ಜಗತ್ತಿನಲ್ಲಿ ಒಟ್ಟು 4.25 ಲಕ್ಷ ಜನ…

ಚನ್ನೈನಲ್ಲಿ ಕೊರೋನಾ ಕಾಟ

ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.

ಕಂಟೈನ್ಮೆಂಟ್ ಬಿಟ್ಟು ಉಳಿದೆಡೆ ವಹಿವಾಟಿಗೆ ಅವಕಾಶ ನೀಡಬೇಕು

ನವದೆಹಲಿ: ದೇಶದಾದ್ಯಂತ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಎಲ್ಲ ರೀತಿಯ…