ಜೈಪುರ : 6 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಯುವತಿ ಕೈ ಕೊಟ್ಟಿದ್ದಾಳೆ ಎಂಬ ಕಾರಣಕ್ಕೆ ಯುವಕನೊಬ್ಬ ಇಡೀ ಸಮಾಜವೇ ತಲೆ ತಗ್ಗಿಸುವಂತಹ ನೀಚ ಕೃತ್ಯಕ್ಕೆ ಕೈ ಹಾಕಿರುವ ಘಟನೆ ನಡೆದಿದೆ. 

ಯುವತಿಯ ಫೋಟೋ ಎಡಿಟ್ ಮಾಡಿ ಸೆಕ್ಸ್ ವರ್ಕರ್ ಎಂದು ಹಾಕಿ ನಂಬರ್ ಅಪ್ಲೋಡ್ ಮಾಡಿದ್ದಾನೆ. ಯುವತಿ ಜೈಪುರ ನಗರದ ಮಾನಸರೋವರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದಾರೆ. ಹುಡುಗನ ಕೃತ್ಯಕ್ಕೆ ಮನನೊಂದು  ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ. 

 ಈ ಯುವತಿ ಕಳೆದ 6 ವರ್ಷಗಳಿಂದ ಲಕ್ಷ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹೀಗಾಗಿ ಯುವತಿ ಬ್ರೇಕಪ್ ಮಾಡಿಕೊಂಡಿದ್ದಾಳೆ. 

ಇದಕ್ಕೆ ಕೋಪಗೊಂಡ ಹುಡುಗ, ಯುವತಿಯ ಪೋಟೋ ಎಡಿಟ್ ಮಾಡಿ ಮೊಬೈಲ್ ನಂಬರ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದರೊಂದಿಗೆ ಮನೆಯ ವಿಳಾಸವನ್ನು ಕೂಡ ಹಾಕಿದ್ದಾನೆ. ಕಳೆದ 6 ತಿಂಗಳಿನಿಂದ ಯುವತಿಗೆ ಅಪರಿಚಿತರು ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ ಯುವತಿ ಮಾನಸಿಕವಾಗಿ ತುಂಬಾ ನೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ಭಾರತೀಯ ಯೋಧರ ದಾಳಿಗೆ , ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂ ಹತ

ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಸಂಘರ್ಷ!

ಕೋಲ್ಕತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘಷರ್ಣೆ ನಡೆದಿರುವ ಘಟನೆ ಪಶ್ಚಿಮ ಬಂಗಳಾದಲ್ಲಿ ನಡೆದಿದೆ.

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.