ಹಾಸನ : ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ಅಂತಿಮಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ಹೊರ ಹಾಕಿದ್ದಾರೆ.

ಹೀಗಾಗಿ 17 ಸ್ಥಾನಗಳನ್ನು ಗೆದ್ದರೂ ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದ್ದು, 13 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯ ಅಭ್ಯರ್ಥಿ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಹೀಗಾಗಿಯೇ ಬೇಸರ ವ್ಯಕ್ತಪಡಿಸಿದ ರೇವಣ್ಣ ಅವರು, ನ್ಯಾಯದೇವತೆಗೆ ಬಿಜೆಪಿ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮಾಡಿದ್ದ ಕೃತ್ಯವನ್ನು ಈಗ ಬಿಜೆಪಿ ಮಾಡುತ್ತಿದೆ. ಈ ಎರಡೂ ಪಕ್ಷಗಳಿಗೂ ಜೆಡಿಎಸ್ ಬೆಳೆಯುವುದು ಹೊಟ್ಟೆ ಕಿಚ್ಚಾಗಿದೆ. ಹರಿಹರ ನಗರಸಭೆಗೆ ಮೀಸಲಾಗಿದ್ದ ಎಸ್ಟಿ ಮೀಸಲಾತಿಯನ್ನು ಹಾಸನ ನಗರಸಭೆಗೆ ಹಾಕಿದ್ದಾರೆ. ರಾಜ್ಯದಲ್ಲಿ ಎಸ್ಟಿಗೆ ಮೀಸಲು ಇರುವುದು ಎರಡೇ ಸ್ಥಾನ. ಅದು ಕೊಪ್ಪಳ ಮತ್ತು ಹರಿಹರಕ್ಕೆ. ಇದನ್ನು ಅಡ್ವೋಕೇಟ್ ಜನರಲ್ ಹೈಕೋರ್ಟಿಗೂ ನೀಡಿದ್ದರು. ಆದರೆ, ಸರ್ಕಾರ ಇದನ್ನು ಬದಲಾಯಿಸಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಹೀಗಾಗಿ ಕೂಡಲೇ ನ್ಯಾಯಾಲಯ ಇದನ್ನು ಗಮನಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಜೆಡಿಎಸ್ ಗೆ ಬಹುಮತ ಇದೆ ಎಂಬ ಕಾರಣಕ್ಕೆ ಅಧಿಕಾರ ತಪ್ಪಿಸಲು ಬಿಜೆಪಿ ಈ ರೀತಿಯ ಕೃತ್ಯಕ್ಕೆ ಕೈ ಹಾಕಿದೆ ಎಂದು ದೂರಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ: ಎಚ್.ಡಿ.ಕೆ

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ

ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ.

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ-ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.