ಹಾಸನ : ಜೆಡಿಎಸ್ ಕೋಟೆಯಲ್ಲಿ ತಂತ್ರದಿಂದ ವಶಪಡಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆಯೇ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ಮೀಸಲಾತಿ ಹೆಸರಿನಲ್ಲಿ ಇಂತಹದೊಂದು ಕೃತ್ಯ ನಡೆಯುತ್ತಿದೆ ಎಂಬ ಆರೋಪ ಸದ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿದೆ.

ನಗರಸಭೆ ಚುನಾವಣೆಯಲ್ಲಿ 17 ಸ್ಥಾನ ಗೆದ್ದು ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿದ್ದ ಜೆಡಿಎಸ್ ಗೆ ಬಿಜೆಪಿ ಶಾಕ್ ನೀಡಿದೆ. ಇನ್ನೊಂದೆಡೆ ಜೆಡಿಎಸ್ ನ ಭದ್ರಕೋಟೆಯಲ್ಲಿ 13 ಸ್ಥಾನ ಗೆದ್ದು, ಮೀಸಲಾತಿ ಬಲದಿಂದ ಬಿಜೆಪಿಯು ಅಧಿಕಾರದ ಸನಿಹಕ್ಕೆ ಹೋಗಿದೆ. 

ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿಯನ್ನು ಸರ್ಕಾರವು ಗುರುವಾರ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಹಾಸನ ಮತ್ತು ಅರಸೀಕೆರೆ ನಗರಸಭೆ ಅಧ್ಯಕ್ಷ ಸ್ಥಾನವನ್ನು ಎಸ್ಟಿ ಅಭ್ಯರ್ಥಿಗೆ ಎಂದು ಘೋಷಿಸಿದೆ. ಹೀಗಾಗಿ ಹಾಸನ ಹಾಗೂ ಅರಸೀಕೆರೆ ನಗರಸಭೆಯಲ್ಲಿ ಅಧಿಕಾರದಿಂದ ಜೆಡಿಎಸ್ ದೂರ ಉಳಿದಂತಾಗಿದೆ. ಈ ಎರಡೂ ನಗರಸಭೆಗಳಲ್ಲಿ ಎಸ್ಟಿ ವರ್ಗದಿಂದ ಅಧ್ಯಕ್ಷರಾಗಲು ಯಾವುದೇ ಸದಸ್ಯರು ಇಲ್ಲದಂತಾಗಿದೆ. ಹೀಗಾಗಿ ಪಕ್ಷದ ನಾಯಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

35 ಸದಸ್ಯರ ಬಲ ಹೊಂದಿರುವ ಹಾಸನ ನಗರ ಸಭೆಯಲ್ಲಿ 17 ಸ್ಥಾನಗಳನ್ನು ಜೆಡಿಎಸ್ ಗೆದ್ದಿತ್ತು. ಬಿಜೆಪಿ 13 ಸ್ಥಾನದಲ್ಲಿ ಜಯಗಳಿಸಿದೆ. ಅರಸೀಕರೆ ನಗರಸಭೆಯಲ್ಲಿ ಜೆಡಿಎಸ್ 22 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಐದು ಸ್ಥಾನಗಳಲ್ಲಿ ಮಾತ್ರ ಗೆದ್ದು ಅಧ್ಯಕ್ಷ ಸ್ಥಾನದ ಸಮೀಪಕ್ಕೆ ಹೋಗಿದೆ. 

ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಕೈವಾಡದಿಂದ ಮೀಸಲಾತಿಯನ್ನು ಬದಲಾವಣೆ ಮಾಡಲಾಗಿದೆ ಎಂದು ಜೆಡಿಎಸ್ ಆರೋಪ ಮಾಡುತ್ತಿದೆ. 

Leave a Reply

Your email address will not be published. Required fields are marked *

You May Also Like

ಅಂದರ ಬಾಹರ ಆಡುತ್ತಿದ್ದ 6 ಜನ ಬಂದನ

ಲಕ್ಷ್ಮೇಶ್ವರ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ)…

ಮೂರುಸಾವಿರಮಠ ಮತ್ತು ಆಸ್ತಿಗಳ ವಿಚಾರ: ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಶ್ರೀಗಳ ಆವ್ಹಾನ

ಶ್ರೀ ಜಗದ್ಗುರು ಮಾರುಸಾವಿರಮಠದ ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಪಟ್ಟ ವಿಚಾರವಾಗಿ ಹೇಳಿಕೆ ನೀಡುವ ಯಾವುದೇ ವ್ಯಕ್ತಿಗಳು ನಮ್ಮೊಂದಿಗೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.

ಲಕ್ಷ್ಮೇಶ್ವರದಲ್ಲಿ : ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಕೊರೋನಾ ಎರಡನೇ ಅಲೆ ಅತೀ ವೇಗವಾಗಿ ಹರಡುತ್ತಿರುವುದರಿಂದ ಶನಿವಾರ, ಭಾನುವಾರ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂ ಅನ್ನು ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು.