ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಎಗ್ಗಿಲ್ಲದೆ ಸಾಗುತ್ತಿದೆ. ಕಳೆದ 25 ಗಂಟೆಗಳಲ್ಲಿ 73,272 ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 69,79,424ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಅಷ್ಟೇ ಅಲ್ಲದೇ, ಕಳೆದ 24 ಗಂಟೆಗಳಲ್ಲಿ 926 ಜನ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,07,416ಕ್ಕೆ ಏರಿಕೆ ಕಂಡಿದೆ.
ದೇಶದಲ್ಲಿ 69,79,424 ಮಂದಿ ಸೋಂಕಿತರ ಪೈಕಿ 59,88,823 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 8,83,185 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ 11,64,018 ಜನರನ್ನು ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ ದೇಶಾದ್ಯಂತ 11,64,018 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ಮೂಲಕ ದೇಶದಲ್ಲಿ ಇಲ್ಲಿಯವರೆಗೂ ಅ.9 ರ ವರೆಗೂ 8,57,98,698 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.