ಬೆಂಗಳೂರು : ಹಲವು ತೊಂದರೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾಗಮಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದೆ.

ವಿದ್ಯಾಗಮದ ಕುರಿತು ಆತಂಕದ ಸುದ್ದಿಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ನಿರ್ಧಾರ ತೆಗೆದುಕೊಂಡಿದ್ದಾರೆ.

ಕೆಲವು ಪ್ರದೇಶಗಳಲ್ಲಿ ವಿದ್ಯಾಗಮದ ಕುರಿತು ವಿರೋಧ ವ್ಯಕ್ತವಾಗಿತ್ತು. ಈ ಕಾರ್ಯಕ್ರಮವನ್ನು ಕೆಳ ಸ್ಥರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತ ಕಾಪಾಡುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿತ್ತು. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಕಾರ್ಯಕ್ರಮ ನಿಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ವಿದ್ಯಾಗಮ ಸಂದರ್ಭದಲ್ಲಿ ಕೊರೊನಾ ವೈರಸ್ ಹರಡಿರುವ ಕುರಿತು ಜಿಲ್ಲಾವಾರು ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸಲಾಗುತ್ತಿದೆ. ಅಲ್ಲಿಯವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ. 

ಇತ್ತೀಚೆಗಷ್ಟೇ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ತಿಳಿದು ಬಂದಿದೆ. ಶಿಕ್ಷಕರಿಂದಲೇ ಮಕ್ಕಳಿಗೆ ಸೋಂಕು ಹರಡಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ಹೀಗಾಗಿ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ.

Leave a Reply

Your email address will not be published. Required fields are marked *

You May Also Like

ದಾವಣಗೆರೆಯಲ್ಲಿ ಕೊರೋನಾ ಸೋಂಕು ಸೆಂಚೂರಿ..!

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 100 ಗಡಿ ದಾಟಿದೆ. ಇವತ್ತು ಒಂದೇ ದಿನ 19 ಪಾಸಿಟೀವ್ ಪ್ರಕರಣ ಪತ್ತೆಯಾಗಿದ್ದು, ಇದರಿಂದ ದಾವಣಗೆರೆಯಲ್ಲಿ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ.

ದೆಹಲಿಯಿಂದ ಬಂದ ವಲಸಿಗರು – ಬೆಂಗಳೂರಿಗರಿಗೆ ಆತಂಕ!

ಬೆಂಗಳೂರು: ದೆಹಲಿ ಯಿಂದ ಗುರುವಾರ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ವಿಶೇಷ ರೈಲು ಬಂದಿದ್ದು, ಇಂದು ಮತ್ತೊಂದು…

ಪಿಯುಸಿ ಫಲಿತಾಂಶ ದಿನಾಂಕ ತಿಳಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಗಣೇಶ ಸಂಭ್ರಮ- ಸಾಂಸ್ಕೃತಿಕ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ಇಲ್ಲಿನ ವಿವಿಧ ಬಡಾವಣೆಯಲ್ಲಿ ಗಣೇಶ ಉತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಲ ಗಜಾನನ ಯುವಕ…