ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಇಲ್ಲಿಯವರೆಗೆ ಕೆಲಸ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಅ. 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ಈ ರೀತಿಯ ಆದೇಶಗಳನ್ನು ಜಾರಿ ಮಾಡುವುದು ಸರಿಯಲ್ಲ. ಹರ ಮುನಿದರೂ ಗುರು ಕಾಯ್ವನು ಎಂಬುದನ್ನು ಸರ್ಕಾರ ಮರೆಯಬಾರದು. ಈ ಕೂಡಲೇ ಸರ್ಕಾರ, ಮಧ್ಯಂತರ ರಜಾ ರದ್ದು ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ : ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನಿರ್ವಹಣೆಗಾಗಿ ಏನೆಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತೋ ಆ ಕೆಲಸ ಸರ್ಕಾರ ಮಾಡಲಿಲ್ಲ. ಈಗಲೂ ಮಾಡಿಕೊಂಡಿಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಆಕ್ಸಿಜನ್ ಬೆಡ್, ಐಸಿಯು ಬೆಡ್ ಸಿಗ್ತಿಲ್ಲ. ಇದರಿಂದ ಸಾಕಷ್ಟು ಜನ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮರಾಜನಗರದ ಸಾವಿನ ಅಂಕಿ ಸಂಖ್ಯೆಯಲ್ಲಿ ಮೊದಲು ಸುಳ್ಳು ಹೇಳಿದ್ದಾರೆ.

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಇನ್ನು 5 ದಿನ ಮಳೆ : 7 ಜಿಲ್ಲೆಗಳಲ್ಲಿ ಹೈ ಅಲರ್ಟ್

ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಸತತ ಮಳೆಯಾಗುತ್ತಿದೆ. ಇನ್ನು ಐದು ದಿನಗಳ ಕಾಲ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನರ‍್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.