ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಇಲ್ಲಿಯವರೆಗೆ ಕೆಲಸ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಅ. 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ಈ ರೀತಿಯ ಆದೇಶಗಳನ್ನು ಜಾರಿ ಮಾಡುವುದು ಸರಿಯಲ್ಲ. ಹರ ಮುನಿದರೂ ಗುರು ಕಾಯ್ವನು ಎಂಬುದನ್ನು ಸರ್ಕಾರ ಮರೆಯಬಾರದು. ಈ ಕೂಡಲೇ ಸರ್ಕಾರ, ಮಧ್ಯಂತರ ರಜಾ ರದ್ದು ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಚರ್ಚ್, ಮಸೀದಿಗಳಲ್ಲಿ ದೀಪ ಬೆಳಗಿಸಿ; ದಿಪಾವಳಿ ಆಚರಿಸಿ- ರಾಜು ಖಾನಪ್ಪನವರ

ಶಾಂತಿ, ಕೋಮು ಸೌಹಾರ್ಧತೆಗೆ ಜಿಲ್ಲೆ ಹೆಸರುವಾಸಿಯಾಗಿದೆ. ಇಂತಹ ಸೌಹಾರ್ಧ ತಾಣದಲ್ಲಿ ದೀಪಾವಳಿ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸೋಣ. ಹೀಗಾಗಿ ಚರ್ಚ್, ದರ್ಗಾ ಮಸೀದಿಗಳಲ್ಲಿ ದೀಪ ಬೆಳಗಿಸುವ ಮೂಲಕ ನಾಡಿನಲ್ಲಿ ಕೋಮು ಸೌಹಾರ್ದತೆ ಬಲಪಡಿಸಲು ಮುಂದಾಗೋಣ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.

25ನೇ ವಾರ್ಡಿನ ಮಾನವಿ ಮತ್ತು 8ನೇ ವಾರ್ಡ ಕಾಂಗ್ರೆಸ್ ಅಭ್ಯರ್ಥಿ ಪೂರ್ಣಿಮಾ ಮತ್ತು 13ಮತ್ತು 19ನೇ ವಾರ್ಡ ಬಿಜೆಪಿ ಗೆ ಜಯ

ಗದಗ:: ಗದಗ ಬೆಟಗೇರಿ ನಗರ ಸಭೆ ಚುನಾವಣೆ ಮತ ಎಣಿಕೆ ಗದಗ ನಗರದ ಗುರು ಬಸವ…

ಮಡದಿ ಮಾಂಗಲ್ಯ ಸರ ಮಾರಿ ಕುಡಿದ ಆತ ಮಾಡಿದ್ದೇನು?

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿದ್ದ ಪಾಪಿ ಪತಿಯೊಬ್ಬ ಮಡದಿಯನ್ನೇ ಕೊಲೆ ಮಾಡಿರುವ ಘಟನೆ ಚೇಳೂರು ಪೊಲೀಸ್‌ ಠಾಣೆ…