ನವದೆಹಲಿ : ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಎಂದಿನಂತೆ ಕಾಯ್ದುಕೊಂಡಿದೆ. ಆದರೆ ಕಳೆದ 24 ಗಂಟೆಗಳಲ್ಲಿ ವೈರಸ್ ನ ಸಂಖ್ಯೆಗಿಂತಲೂ ಚೇತರಿಕೆ ಪ್ರಮಾಣ ಹೆಚ್ಚಾಗಿದೆ.


ದೇಶದಲ್ಲಿ ಒಂದೇ ದಿನ 74,383 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 70,53,807ಕ್ಕೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 918 ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸತ್ತವರ ಸಂಖ್ಯೆ 1,08,334ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆ 3ನೇ ದಿವೂ 9 ಲಕ್ಷಕ್ಕಿಂತ ಕಡಿಮೆ ದಾಖಲಾಗಿದೆ. ದೇಶದ ಒಟ್ಟಾರೆ 70,53,807 ಸೋಂಕಿತರ ಪೈಕಿ 60,77,977 ಜನ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,67,496 ಜನ ಸೋಂಕಿತರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 10,78,544 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ.

ಒಂದೇ ದಿನ ದೇಶಲ್ಲಿ 10,78,544 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಅ.10ರ ವರೆಗೂ 8,68,77,242 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

You May Also Like

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ಕಾಲುವೆಗೆ ಉರುಳಿ ಬಿದ್ದ ಬಸ್ಸು: 32 ಜನ ದುರ್ಮರಣ

ರಾಜ್ಯ ರಾಜಧಾನಿ ಭೋಪಾಲ್‌ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ 32 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಮುಳುಗಿದ ಶಂಕೆ ಇದೆ.

ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ

ನವದೆಹಲಿ: ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ಕೈಗೊಂಡಿದ್ದು, ಹಲವು…

ಬುದ್ದಿ ವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು:ರಘುರಾಮ ರಾಜನ್

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.