ನವದೆಹಲಿ : ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಎಂದಿನಂತೆ ಕಾಯ್ದುಕೊಂಡಿದೆ. ಆದರೆ ಕಳೆದ 24 ಗಂಟೆಗಳಲ್ಲಿ ವೈರಸ್ ನ ಸಂಖ್ಯೆಗಿಂತಲೂ ಚೇತರಿಕೆ ಪ್ರಮಾಣ ಹೆಚ್ಚಾಗಿದೆ.


ದೇಶದಲ್ಲಿ ಒಂದೇ ದಿನ 74,383 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 70,53,807ಕ್ಕೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 918 ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸತ್ತವರ ಸಂಖ್ಯೆ 1,08,334ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆ 3ನೇ ದಿವೂ 9 ಲಕ್ಷಕ್ಕಿಂತ ಕಡಿಮೆ ದಾಖಲಾಗಿದೆ. ದೇಶದ ಒಟ್ಟಾರೆ 70,53,807 ಸೋಂಕಿತರ ಪೈಕಿ 60,77,977 ಜನ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,67,496 ಜನ ಸೋಂಕಿತರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 10,78,544 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಮಾಹಿತಿ ನೀಡಿದೆ.

ಒಂದೇ ದಿನ ದೇಶಲ್ಲಿ 10,78,544 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಅ.10ರ ವರೆಗೂ 8,68,77,242 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ಲೆಕ್ಕದಲ್ಲಿ ರಾಜ್ಯದಲ್ಲಿ ಸೋಂಕಿಗೆ ಒಳಗಾದವರು ಎಷ್ಟು ಜನ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವೈರಸ್ ಗೆ ಸುಮಾರು 2 ಕೋಟಿ ಜನರಿಗೆ ತಗುಲಿದೆ ಎಂದು ಸರ್ಕಾರ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ.

ಎಲ್‌ಪಿಜಿ ದರ ದುಪ್ಪಟ್ಟು: ಧರ್ಮೇಂದ್ರ ಪ್ರಧಾನ್

ಕಳೆದ 7 ವರ್ಷಗಳಲ್ಲಿ ಎಲ್‌ಪಿಜಿ ದರ ದುಪ್ಪಟ್ಟಾಗಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ.459ರಷ್ಟು ಹೆಚ್ಚಿದೆ ಎಂದು ಕೇಂದ್ರ ಸರಕಾರ ಒಪ್ಪಿಕೊಂಡಿದೆ.

ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಚೀನಾಕ್ಕೆ ನೀಡುತ್ತಿದೆ ಭಾರತ?

ಲಡಾಖ್‌: ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಗಡಿ ಕ್ಯಾತೆ ಮುಂದುವರೆದ ನಡುವೆಯೇ ಭಾರತ ಯುದ್ಧಕ್ಕೆ ಸಿದ್ಧ ಎಂಬ…

ಯಾವುದೇ ಕ್ಷಣದಲ್ಲಾದರೂ ವಿಜಯ್ ಮಲ್ಯ ಅರೆಸ್ಟ್!!

ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.