ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಮತ್ತೊಂದು ದಾಖಲೆ ಬರೆದಿದೆ. ಅಲ್ಲದೇ, ಸಾವಿನ ಸಂಖ್ಯೆಯಲ್ಲಿ ರಾಜ್ಯವು 10 ಸಾವಿರದ ಮೈಲಿಗಲ್ಲು ದಾಟಿದೆ.


ರಾಜ್ಯದಲ್ಲಿ ಇಂದು 7,606 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. 70 ಜನ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 10,036ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,17,915ಕ್ಕೆ ಏರಿಕೆ ಕಂಡಿದೆ. ಅಲ್ಲದೇ ಸಕ್ರಿಯ ಪ್ರಕರಣ ಸಂಖ್ಯೆಯೂ 1,15,776ಕ್ಕೆ ಏರಿದೆ.

ಇಂದು ಆಸ್ಪತ್ರೆಯಿಂದ 12,030 ಜನ ಬಿಡುಗಡೆ ಹೊಂದಿದ್ದಾರೆ. ಇದುವರೆಗೂ ಒಟ್ಟು 5,92,084 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. 928 ಜನ ವಿವಿಧ ಆಸ್ಪತ್ರೆಗಳಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 23,564 ಜನರನ್ನು ರ್ಯಾ ಪಿಡ್ ಟೆಸ್ಟ್, 55,193 ಆರ್.ಟಿ ಪಿಸಿಆರ್ ಮತ್ತು ಇತರ ಟೆಸ್ಟ್ ಗೆಒಳಪಡಿಸಲಾಗಿದೆ. ಒಟ್ಟಾರೆ 78,757 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ.

ಇಂದು ಬೆಂಗಳೂರಿನಲ್ಲಿ 3,498 ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. ಇನ್ನುಳಿದಂತೆ ಬೆಳಗಾವಿ 444, ಚಿತ್ರದುರ್ಗ 210, ದಕ್ಷಿಣ ಕನ್ನಡ 303, ಹಾಸನ 278, ಮೈಸೂರು 264, ಉಡುಪಿ 317 ಜನ ಸೋಂಕಿಗೆ ಒಳಗಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೋಧಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚನೆ

2020-21 sಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಪ್ರಾರಂಭಕ್ಕೆ ಅಗತ್ಯವಿರುವ ಪೂರ್ವ ಸಿದ್ಧತೆಗಳಾದ Dijital learning online/offline teaching, Study material preparation, LMS Preparation ಮುಂತಾದವುಗಳ ಬಗ್ಗೆ ತಯಾರಿ ಮಾಡಿಕೊಳ್ಳಲು, ಇಲಾಖೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿನ ವಿಶ್ವವಿದ್ಯಾಲಯಗಳ ಭೋಧಕರಿಗೆ ಸೂಚಿಸಲಾಗಿದೆ.

ಲಾಕ್‌ಡೌನ್ ನಿರ್ಬಂಧಗಳಲ್ಲಿ ಬದಲಾವಣೆ : 19 ಜಿಲ್ಲೆಗಳಲ್ಲಿ ಸೆಮಿ ಲಾಕ್‌ಡೌನ್ ಜಾರಿ

ರಾಜ್ಯದ ಕೆಲ ಭಾಗಗಳಲ್ಲಿ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾಗುತ್ತಿದ್ದು, ಜೂ.10 ರಂದು ಸಿಎಂ ಯಡಿಯೂರಪ್ಪ ಲಾಕ್‌ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ.

ಮಹಿಳೆಯಿಂದ ಕಾಂಗ್ರೆಸ್ ಮುಖಂಡನಿಗೆ ಥಳಿತ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲಾಧ್ಯಕ್ಷ ಅನುಜ್ ಮಿಶ್ರಾ ಎಂಬ ವ್ಯಕ್ತಿಯ ಮೇಲೆಯೇ ಹಲ್ಲೆ ನಡೆದಿದೆ.

ಕಲ್ಲು ಗಣಿಗಾರಿಕೆಯಿಂದ ಬೇಸತ್ತ ಗ್ರಾಮಸ್ಥರು

ಅಧಿಕಾರಿಗಳ ಲೆಕ್ಕದಲ್ಲಿ ಇಲ್ಲಿನ ಕ್ರಷರ್ ಗಳನ್ನು ಬಂದ್ ಮಾಡಲಾಗಿದೆ.ಅಥವಾ ನಿಯಮದಂತೆ ಕಾರ್ಯ ನಿರ್ವಹಿಸುತ್ತಿವೆ. ಹಾಗಾದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೂ ಗ್ರಾಮಸ್ಥರ ಸಹನೆಯ ಕಟ್ಟೆ ಒಡೆದಾಗ ಹೊಟ್ಟೆಯೊಳಗಿನ ಸಿಟ್ಟು ರಟ್ಟೆಗೆ ಬರಲೇಬೇಕಲ್ಲವೇ. ಶಿರಹಟ್ಟಿ ತಾಲೂಕಿನ ಪರಸಾಪೂರದ ಸುತ್ತಮುತ್ತಲಿನ ಗ್ರಾಮಸ್ಥರ ಪಾಡು ಈಗ ಹಾಗೆ ಆಗಿದೆ.