ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ಆತಂಕ ಮಾತ್ರ ಇನ್ನೂ ನಿಂತಿಲ್ಲ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 71 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 66,732 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 71,20,539ಕ್ಕೆ ಏರಿಕೆ ಕಂಡಿದೆ. ಇನ್ನೂ ಒಂದೇ ದಿನ 816 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
71,20,539ರ ಪೈಕಿ 61,49,536 ಜನ ಕೊರೊನಾ ರೋಗಿಗಳು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಹೀಗಾಗಿ ಸದ್ಯ ದೇಶದಲ್ಲಿ 8,61,853 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳಲ್ಲಿ 816 ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 01,09,150ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾನುವಾರ 9,94,851 ಜನರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದುವರೆಗೂ 8,78,72,093 ಜನರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.