ಮಸ್ಕಿ: ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ಚನ್ನಬಸನ ಪತ್ತೆಗೆ ಹಿನ್ನಡೆಯಾಗಿರುವ ತಾಲೂಕ ಆಡಳಿತ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಾಲೂಕ ಆಡಳಿತ ವಿರುದ್ಧ ಅಕ್ರೋಶ ಹೊರ ಹಾಕಿದರು.

ಈ ವೇಳೆ ರೈತ ಸಂಘದ ಮುಖಂಡ ವಿಜಯಕುಮಾರ ಬಡಿಗೇರ ಮಾತನಾಡಿ, ಹಳ್ಳದ ಪ್ರವಾಹಕ್ಕೆ ಸಿಲುಕಿದ ಚನ್ನಬಸವನ ರಕ್ಷಣೆ ಮಾಡುವಲ್ಲಿ ತಾಲೂಕು ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ಹಳ್ಳದ ಪ್ರವಾಹಕ್ಕೆ ಸಿಲುಕಿದ ಚನ್ನಬಸನ ರಕ್ಷಣೆ ವೇಳೆ ಪೂರ್ವತಯಾರಿ ಮಾಡದೇ ಏಕಾಏಕಿ ಹಗ್ಗದ ಮೂಲಕ ಹಳ್ಳಕ್ಕೆ ಇಳಿದಿದ್ದು ಅಪಾಯಕ್ಕೆ ಕಾರಣವಾಗಿದೆ. ಜಲೀಲ್ ಅವರನ್ನು ಕ್ರೇನ್ ಮೂಲಕ ರಕ್ಷಣೆ ಮಾಡಿದ ರೀತಿಯಲ್ಲಿ ಚನ್ನಬಸನ ರಕ್ಷಣೆ ಮಾಡಿದರೆ ಒಂದು ಜೀವ ಉಳಿಯುತಿತ್ತು. ಚನ್ನಬಸವ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ, ಅವನಿಗೆ ನಂಬಿ ಜೀವನ ಕಟ್ಟಿಕೊಂಡಿದ್ದ ಅವರ ಕುಟುಂಬ ಬೀದಿಗೆ ಬಂದಂತೆ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

ಸರಕಾರ ಇತ್ತ ಗಮನ ಹರಿಸಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ಮಾಡಿದ ತಾಲೂಕ ತಹಶೀಲ್ದಾರ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಶೋಕ ಮುರಾರಿ, ದುರ್ಗರಾಜ ವಟಗಲ್ಲ, ಅನೀಲಕುಮಾರ, ದೇವರಾಜ ಮಡಿವಾಳ, ಸಿದ್ದು ಮುರಾರಿ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

283ನೇ ಸಂತ ಸೇವಾಲಾಲ್ ಜಯಂತಿ ರದ್ದು

ದಾವಣಗೇರಿ:ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ…

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ಬೋಧನೆಯಲ್ಲಿ ಆಧುನಿಕತೆ ತಂತ್ರಜ್ಞಾನ ಬಳಸಿಕೊಳ್ಳಿ: ಜಾಲಿಹಾಳ

ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.

ಡಿಕೆಸಿ ಅವರಿಗೇಕೆ ಈ ಸಂಶಯ

ಕುಂಬಳಕಾಯಿ ಕಳ್ಳ ಎಂದಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಡಿಕೆಸಿ ಅವರಿಗೆ ಏಕೆ ಈ ಸಂಶಯ ಎಂದು ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಶ್ನಿಸಿದೆ.