ಸದ್ಯದಲ್ಲಿಯೇ ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿದೆಯಂತೆ ಬಾಂಗ್ಲಾದೇಶ!

ನವದೆಹಲಿ : ದೇಶದ ಜಿಡಿಪಿ ಕುರಿತು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮೋದಿ ವಿರುದ್ಧ ಗುಡುಗಿದ್ದಾರೆ.

 ಬಾಂಗ್ಲಾದೇಶದ ತಲಾ ಜಿಡಿಪಿ ಭಾರತದ ತಲಾ ಜಿಡಿಪಿಯ ಮಟ್ಟಕ್ಕೆ ತಲುಪುತ್ತಿದೆ. ಈ ಕುರಿತು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ವರದಿಗಳನ್ನು ಉಲ್ಲೇಖಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯ ಪರಿಣಾಮವಾಗಿ ಬಾಂಗ್ಲಾದೇಶ ಭಾರತವನ್ನು ಹಿಂದಿಕ್ಕುವ ಪ್ರಯತ್ನದಲ್ಲಿದೆ ಎಂದು ಕಿಡಿಕಾರಿದ್ದಾರೆ. ವೈರಸ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ಹಾನಿಗೊಳಗಾದ ಭಾರತೀಯ ಆರ್ಥಿಕತೆಯು ಈ ವರ್ಷ ಶೇ. 10.3ರಷ್ಟು ಕುಸಿಯುವ ನಿರೀಕ್ಷೆಯಿದೆ ಎಂದು ಐಎಂಎಫ್ ಹೇಳಿತ್ತು.

ಭಾರತವು 2021ರಲ್ಲಿ ಶೇ. 8.8ರಷ್ಟು ಬೆಳವಣಿಗೆಯ ದರವನ್ನು ಹಿಮ್ಮೆಟ್ಟಿಸುವ ಸಾಧ್ಯತೆಯಿದ್ದು, ತಮ್ಮ ಆರ್ಥಿಕತೆಯ ಸ್ಥಾನವನ್ನು ಮರಳಿ ಪಡೆಯುತ್ತದೆ. ಅಷ್ಟೇ ಅಲ್ಲದೇ, ಚೀನಾದ ಬೆಳವಣಿಗೆಯ ದರವನ್ನು ಶೇ. 8.2ನ್ನು ಮೀರಿಸಲಿದೆ ಎಂದು ಐಎಂಎಫ್ ತನ್ನ ಇತ್ತೀಚಿನ ವಿಶ್ವ ಆರ್ಥಿಕ ಔಟ್ ಲುಕ್ ವರದಿಯಲ್ಲಿ ತಿಳಿಸಿದೆ. 

Exit mobile version