ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ನಟ ಸುಶಾಂತ್ ಸಾವಿನ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡ ಇರುವ ಕುರಿತು ಪುರಾವೆ ಸಿಕ್ಕಿಲ್ಲ ಎಂದು ತಂಡ ಅಭಿಪ್ರಾಯಪಟ್ಟಿದೆ ಎಂದು ತಿಳಿದು ಬಂದಿದೆ.

ತನಿಖೆಯಲ್ಲಿ ಸಿಕ್ಕಷ್ಟು ಮಾಹಿತಿಗಳನ್ನು ಶೀಘ್ರದಲ್ಲಿಯೇ ನ್ಯಾಯಾಲಯಕ್ಕೆ ಸಲ್ಲಿಸಲು ಸಿಬಿಐ ತಯಾರಿ ನಡೆಸಿದೆ. ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅವರ ವಿರುದ್ಧದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳ ಕುರಿತು ಮುಂದಿನ ಕ್ರಮ ತೆಗೆದುಕೊಳ್ಳುವುದರ ಕುರಿತು ನ್ಯಾಯಾಲಯ ನಿರ್ಧರಿಸುವ ಸಾಧ್ಯತೆ ಇದೆ.

ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಏಮ್ಸ್ ಸಮಿತಿ ವರದಿ ನೀಡಿದ ಬೆನ್ನಲ್ಲಿಯೇ ಸಿಬಿಐ ತನ್ನ ತನಿಖೆಯನ್ನು ಮುಕ್ತಾಯಗೊಳಿಸಿ ವರದಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಜೂ. 14ರಂದು ಮುಂಬಯಿನ ಬಾಂದ್ರಾದಲ್ಲಿರುವ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಇದು ಆತ್ಮಹತ್ಯೆ ಅಲ್ಲ ಎಂದು ಘೋಷಿಸಿದ್ದರು. ಅಲ್ಲದೇ, ಪೊಲೀಸರ ತನಿಖೆ ಇನ್ನೂ ಪ್ರಗತಿಯಲ್ಲಿರುವಾಗಲೇ ಪ್ರಕರಣವು ಸಿಬಿಐ ಕೈಯಲ್ಲಿ ಸಿಕ್ಕಿತ್ತು. ಈ ಸಂದರ್ಭದಲ್ಲಿಯೇ ಜಾರಿ ನಿರ್ದೇಶನಾಲಯ ಮತ್ತು ಮಾದ ಕವಸ್ತು ನಿಯಂತ್ರಣ ಸಂಸ್ಥೆಗಳು ಅಕ್ರಮ, ವರ್ಗಾವಣೆ ಹಾಗೂ ಮಾದಕವಸ್ತು ಸಾಗಣೆಯ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದವು.

Leave a Reply

Your email address will not be published. Required fields are marked *

You May Also Like

ಟಾಲಿವುಡ್ ಅಂಗಳದಲ್ಲಿ ಮೆರೆಯಲಿದ್ದಾರೆ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅವರನ್ನು ಟಾಲಿವುಡ್ ಅಂಗಳಕ್ಕೆ ಕರೆ ತರುವ ಮಾತುಗಳು ಮುನ್ನೆಲೆಗೆ ಬಂದಿದೆ.

ನಟ ಸುಶಾಂತ್ ಸಿಂಗ್ ಲಾಸ್ಟ್ ಪಿಕ್ಚರ್ ಟ್ರೈಲರ್: ಬದುಕು-ಸಾವಿನ ತಲ್ಲಣದ ಕಹಾನಿ

‘ಯಾವಾಗ ಹುಟ್ಟಬೇಕು, ಯಾವಾಗ ಸಾಯಬೇಕು ಎಂದು ನಿರ್ಧರಿಸುವುದು ನಮ್ ಕೈಲಿಲ್ಲ. ಆದರೆ, ಹೇಗೆ ಬದುಕಬೇಕು ಎಂದು…

ಚಿರಂಜೀವಿಗೆ ಮತ್ತೆ ಜೀವ ಬಂದಿದೆ ಎಂದ ನಟಿ ಮೇಘನಾ!

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾಗಿರುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರು ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಪ್ರಭಾಸ್ ಗೆ ದೀಪಿಕಾ ಡಾರ್ಲಿಂಗ್ ಅನ್ನಲಿದ್ದಾರಂತೆ!

ಬಾಹುಬಲಿ ಖ್ಯಾತಿಯ ಪ್ರಭಾಸ್ ಅವರಿಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ಜೋಡಿಯಾಗುತ್ತಿದ್ದಾರೆ.