ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಅವರ ವಾರ್ಷಿಕ ಆಸ್ತಿ ವಿವರವನ್ನು ಕಾರ್ಯಾಲಯ ಸ್ವಯಂ ಪ್ರೇರಣೆಯಿಂದ ಪ್ರಕಟಿಸಿದೆ. ಈ ವರದಿಯಲ್ಲಿ 2020ರ ಜೂ. 30ರ ವರೆಗಿನ ಮಾಹಿತಿ ಕುರಿತು ವಿವರಣೆ ನೀಡಲಾಗಿದೆ.
ಬ್ಯಾಂಕ್‌ ನಲ್ಲಿ ಹೂಡಿಕೆ ಮಾಡಿರುವುದು ಮತ್ತು ಹೂಡಿಕೆ ಮಾಡಿದ ಹಣಕ್ಕೆ ಬಡ್ಡಿ ಸಿಕ್ಕಿರುವ ಕಾರಣ ಆಸ್ತಿಯ ಮೌಲ್ಯ ಏರಿಕೆಯಾಗಿದೆ. ಪ್ರಧಾನಿ ಮೋದಿ ಯಾವುದೇ ಸಾಲ ತೆಗೆದುಕೊಂಡಿಲ್ಲ ಮತ್ತು ಅವರ ಹೆಸರಿನಲ್ಲಿ ಯಾವುದೇ ವಾಹನ ಇಲ್ಲ.

2020ರ ಜೂನ್‌ 30ರ ಸಂದರ್ಭದಲ್ಲಿ ಮೋದಿಯವರ ಬಳಿ ರೂ. 31,450 ಇತ್ತು. ಗಾಂಧಿನಗರದ ಎಸ್ ಬಿಐ ಬ್ರಾಂಚ್‌ ನಲ್ಲಿರುವ ಉಳಿತಾಯ ಖಾತೆಯಲ್ಲಿ ರೂ. 3,38,173 ಹಣ ಇದೆ. ಕಳೆದ ವರ್ಷ ಇದು ಈ ಬ್ಯಾಂಕ್ ಖಾತೆಯಲ್ಲಿ ರೂ. 4,143 ಇತ್ತು. ಈ ಬ್ಯಾಂಕಿನಲ್ಲಿ ಎಫ್‌ ಡಿಆರ್‌ ಮತ್ತು ಎಂಒಡಿ ಬ್ಯಾಲೆನ್ಸ್‌ ರೂ. 1,60,28,039 ಇದೆ. ಹಿಂದಿನ ಹಣಕಾಸು ವರ್ಷದಲ್ಲಿ ಇದು ರೂ. 1,27,81,574 ಇತ್ತು. 2019 ರ ಲೋಕಸಭಾ ಚುನಾವಣೆಯ ಅಫಿಡವಿಟ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಾಹಿತಿಯನ್ನು ಘೋಷಿಸಿದ್ದರು.

ಅಷ್ಟೇ ಅಲ್ಲದೇ, ಎಲ್ ಅಂಡ್ ಟಿ ಇನ್ಫ್ರಾಿಸ್ಟ್ರಕ್ಚರ್ ನಲ್ಲಿ ರೂ. 20 ಸಾವಿರ ಹೂಡಿಕೆ ಮಾಡಿದ್ದಾರೆ. ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್ ಅಡಿ ರೂ. 5,18,235 ಹೂಡಿಕೆ ಮಾಡಿದ್ದಾರೆ. ಅಲ್ಲದೇ, ರೂ. 1,59,281 ಮೌಲ್ಯದ ಎಲ್ ಐಸಿ ಪ್ರೀಮಿಯಂ ಕಟ್ಟಿದ್ದಾರೆ. ಮೋದಿ ಅವರ ಬಳಿ ನಾಲ್ಕು ಚಿನ್ನದ ಉಂಗುರಗಳಿವೆ. ಅವುಗಳ ಮೌಲ್ಯ ರೂ. 1,51,875 ಆಗಿದೆ. ಪ್ರಧಾನಿ ಅವರು, ರೂ. 1,30,488 ಪಾವತಿಸಿ, ವಸತಿ ಕಟ್ಟಡವೊಂದನ್ನು ಖರೀದಿಸಿದ್ದರು. ಈ ಭೂಮಿಯ ಮೇಲೆ ಸದ್ಯ ರೂ. 2,47,208 ಹೂಡಿಕೆ ಮಾಡಿದ್ದಾರೆ. ಸದ್ಯ ಈ ಮಾರುಕಟ್ಟೆಯ ಬೆಲೆ ರೂ. 1.1 ಕೋಟಿ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.

ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ‍್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.