ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಧ್ಯಕರ್ನಾಟಕ, ಉತ್ತರ ಕರ್ನಾಟಕದಲ್ಲಿ ತೀವ್ರ ಮಳೆಯಾಗುತ್ತಿದ್ದು ಕಲಬುರಗಿ, ವಿಜಯಪುರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವರು ಮನೆ, ಆಸ್ತಿ, ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದಿರುವ ಅವರು, ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೋರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಹಳಕಟ್ಟಿ ಶಾಲೆಯಲ್ಲಿ ಅಮೃತ ಮಹೋತ್ಸವ ಸಂಭ್ರಮ ದೇಶಪ್ರೇಮ ಯುವಜನತೆಯಲ್ಲಿ ಚಿರಾಯುವಾಗಲಿ – ಜಿ.ಎಂ.ಕೋಟ್ಯಾಳ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಜಾತಿ, ಮಥ, ಪಂಥ, ಧರ್ಮಕ್ಕಿಂತ ದೇಶ ದೊಡ್ಡದು. ಆ ಅಭಿಮಾನ,ಗೌರವಯುಳ್ಳ ದೇಶ…

ರಾಜ್ಯದಲ್ಲಿಂದು 515 ಕೊರೊನಾ ಸೋಂಕಿತರಲ್ಲಿ 482 ಕೇಸ್ ಗೆ ಅಂತರಾಜ್ಯ ಹಿನ್ನೆಲೆ: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 515 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ.

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿ

ಮೈಸೂರು: ರಾಜ್ಯದ ಎಸ್.ಟಿ ಕಾರ್ಯಕಾರಿ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಎಸ್.ಟಿ ಸಮುದಾಯ ಒತ್ತಾಯಿಸಿದರು.

ನೈತಿಕ ಮೌಲ್ಯದಿಂದ ಸುಂದರ ಭವಿಷ್ಯ- ಹೇಮಗಿರಿಮಠ

ಉತ್ತರಪ್ರಭ ಸುದ್ದಿಆಲಮಟ್ಟಿ: ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಭವಿಷ್ಯ ರೂಪಗೊಳ್ಳುತ್ತದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ…