ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಧ್ಯಕರ್ನಾಟಕ, ಉತ್ತರ ಕರ್ನಾಟಕದಲ್ಲಿ ತೀವ್ರ ಮಳೆಯಾಗುತ್ತಿದ್ದು ಕಲಬುರಗಿ, ವಿಜಯಪುರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವರು ಮನೆ, ಆಸ್ತಿ, ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದಿರುವ ಅವರು, ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೋರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾ.31ರ ವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಪಾಸಿಟಿವಿಟಿ ದರ ಹೆಚ್ಚಿದ್ದಲ್ಲಿ ವಿಶೇಷ ನಿಗಾ ವಹಿಸಿ

ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನರು ಸೋಂಕು ತೆಡೆಗಟ್ಟುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಕೆ ಅವರು ತಿಳಿಸಿದ್ದಾರೆ.