ಫ್ರಾನ್ಸ್ ನಲ್ಲಿ ಒಂದೇ ದಿನ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ಫ್ರಾನ್ಸ್ : ಫ್ರಾನ್ಸ್ ನಲ್ಲಿ ಕೊರೊನಾ ಮತ್ತೆ ಆತಂಕ ಮೂಡಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 30 ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಪ್ರಧಾನಿ ಜೀನ್ ಕ್ಯಾಸ್ಟೆಕ್ಸ್ ಟ್ವೀಟ್ ಮಾಡಿದ್ದು, ಫ್ರೆಂಚ್ ನಾಗರಿಕರಿಗೆ ಪರಿಸ್ಥಿತಿಯ ಗಂಭೀರತೆ ಅರ್ಥಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಮಹಾಮಾರಿಯ ಅಟ್ಟಹಾಸದಿಂದಾಗಿ ಫ್ರಾನ್ಸ್ ನಲ್ಲಿ ನಾಲ್ಕು ವಾರಗಳ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಒಂದೊಮ್ಮೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ ಅದನ್ನು ವಿಸ್ತರಿಸಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ. ಅಲ್ಲದೇ, ಪ್ರಮುಖ ನಗರಗಳಲ್ಲಿ ಶನಿವಾರ ಮಧ್ಯರಾತ್ರಿಯಿಂದ ಕರ್ಫ್ಯೂ ಜಾರಿಗೆ ಬರಲಿದೆ.

ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು ಎಂಬ ಮನಸ್ಥಿತಿ ಪ್ರತಿಯೊಬ್ಬರಲ್ಲಿ ಬೆಳೆಯಬೇಕು. ನಿಧಾನವಾಗಿ ಬೇರೆಯವರನ್ನೂ ನಮ್ಮ ಜತೆಯಲ್ಲಿ ಕಾಪಾಡುತ್ತೇವೆ ಎನ್ನುವ ಮನಸ್ಥಿತಿಗೆ ಬರಬೇಕಿದೆ. ಆಗ ಮಾತ್ರ ಸೋಂಕು ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿದ್ದಾರೆ.

Exit mobile version