ಕಲಬುರಗಿ : ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಇದರಿಂದಾಗಿ ಜನ ಬೀದಿಗೆ ಬಂದು ನಿಂತಿದ್ದಾರೆ.

ಇದರ ಮಧ್ಯೆಯೇ ಮಹಾರಾಷ್ಟ್ರ ರಾಜ್ಯವೂ ಜಲಂಗಡಾಂತರಕ್ಕೆ ಸಾಕ್ಷಿಯಾಗುತ್ತಿದೆ. ಇದರಿಂದಾಗಿ ಕಲಬುರಗಿ ಜಿಲ್ಲೆಯ 148 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ಮುಳುಗಡೆಯ ಸಂಕಷ್ಟದಲ್ಲಿವೆ.

20 ವರ್ಷಗಳಲ್ಲಿಯೇ  ಎಂದೂ ಕಂಡರಿಯದಂತಹ ಮಳೆ ಸುರಿಯುತ್ತಿದೆ. ವಾಯುಭಾರ ಕುಸಿತದಿಂದಾಗಿ ಮಹಾರಾಷ್ಟ್ರದಲ್ಲಿ ಕೂಡ ಹೆಚ್ಚಿನ ಮಳೆಯಾಗುತ್ತಿದ್ದು, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಯಾಗುತ್ತಿದೆ.

ಕಲಬುರಗಿ ಜಿಲ್ಲೆಯ ಜನರ ಬದುಕನ್ನು ಇದು ಕಿತ್ತುಕೊಂಡಿದೆ. ಮಹಾರಾಷ್ಟ್ರದ ಉಜನಿ, ವೀರ್ ಡ್ಯಾಮ್ ಗಳಿಂದ ಕ್ಷಣ ಕ್ಷಣಕ್ಕೂ ನೀರಿನ ಹರಿವು ವಿಪರೀತವಾಗಿ ಹೆಚ್ಚಾಗುತ್ತಿದೆ. ಸದ್ಯ ಭೀಮಾ ನದಿ ಭೋರ್ಗರೆಯುತ್ತಿದ್ದು, ನದಿ ತೀರದ 148 ಗ್ರಾಮಗಳಿಗೆ ಮುಳುಗಡೆಯ ಸಂಕಷ್ಟ ಬಂದು ನಿಂತಿದೆ. ಅಲ್ಲದೇ, ಈಗಾಗಲೇ ಹಲವು ಗ್ರಾಮಗಳು ಮುಳುಗಡೆಯಾಗಿವೆ.

ಸರ್ಕಾರದ ಅಂಕಿ – ಸಂಖ್ಯೆಯಂತೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 4,819 ಮನೆಗಳಿಗೆ ನೀರು ನುಗ್ಗಿದೆ. 1058 ಮನೆಗಳು ಬಹುತೇಕವಾಗಿ ಹಾನಿಯಾಗಿವೆ. 518 ಜಾನುವಾರುಗಳ ಜೀವ ಹಾನಿಯಾಗಿದೆ. ಸದ್ಯ ಭೀಮಾ ನದಿಯ ಆರ್ಭಟ ಇನ್ನೂ ಹೆಚ್ಚಾಗುತ್ತಿರುವುದರಿಂದ ಯಾವೆಲ್ಲ ಅನಾಹುತಗಳು ಸಂಭವಿಸಲಿವೆ ಎಂಬ ಚಿಂತೆ ಜಿಲ್ಲೆಯ ಜನರನ್ನು ಕಾಡುತ್ತಿದೆ. 

ಜಿಲ್ಲೆಯ ಜೇವರ್ಗಿ, ಚಿತ್ತಾಪುರ, ಅಫ್ಜಲ್ಪುದರ ಹಾಗೂ ಸೇಡಂ ತಾಲೂಕಿನ ಹಲವು ಗ್ರಾಮಗಳು ಮುಳುಗಡೆಯಾಗಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ರೈತ ಸ್ನೇಹಿಯಾಗಿದ್ದ 5 ಎತ್ತುಗಳು ದಿಕ್ಸಂಗಾ ಗ್ರಾಮದಲ್ಲಿ ತೇಲಿ ಹೋಗಿವೆ. ಚಿಂಚೋಳಿ ತಾಲೂಕಿನಲ್ಲಿ ಇಡೀ ರಾತ್ರಿ ಮಳೆರಾಯ ಬೆಂಬಿಡದೆ ಭೂಮಿಗೆ ಬಂದಿದ್ದಾನೆ. ನಾಗಾಇದಾಲಾಯಿ ಗ್ರಾಮದ ಕೆರೆ ಒಡೆದು ಗ್ರಾಮಕ್ಕೆ ನೀರು ನುಗ್ಗಿದೆ. ದವಸ – ಧಾನ್ಯ ಕಳೆದುಕೊಂಡಿರುವ ರೈತರು ಕಂಗಾಲಾಗಿ ಬೀದಿಗೆ ಬಂದು ನಿಂತಿದ್ದಾರೆ. 

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ…

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾರ್ಯಕ್ರಮ: ಕೆ.ಎಸ್.ಈಶ್ವರಪ್ಪ

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಂಡರಗಿ ಜಿಎಚ್ಎಚ್ ಆಗ್ರೋ ಕೇಂದ್ರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ

ಜಿಎಚ್ಎಚ್ ಆಗ್ರೋ ಕೇಂದ್ರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೇಂದ್ರ ಜಪ್ತಿ ಮಾಡಿದ ಘಟನೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!

ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.