ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭವಿಷ್ಯ ನುಡಿಯದಂತೆ ಆಯೋಗ ಎಚ್ಚರಿಕೆ ನೀಡಿದೆ.
2020ರ ಅ. 28 ರಂದು ಬೆಳಿಗ್ಗೆ 7 ಹಾಗೂ 7ರಂದು ಸಂಜೆ 6.30ರ ನಡುವಿನ ಅವಧಿಯಲ್ಲಿ ಯಾವುದೇ ಕಾರ್ಯಕ್ರಮ ಅಥವಾ ಲೇಖನ ಪ್ರಸಾರ ಮಾಡಬಾರದು ಎಂದು ಮಾಧ್ಯಮಗಳಿಗೆ ಆಯೋಗ ತಿಳಿಸಿದೆ. ಬಿಹಾರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಅ. 28ರಿಂದ ಆರಂಭವಾಗಲಿದೆ.
ಬಿಹಾರ ಚುನಾವಣೆ ಸಂದರ್ಭದಲ್ಲಿ ಜ್ಯೋತಿಷಿ, ವಿಶ್ಲೇಷಕರ ಮುನ್ಸೂಚನೆ, ಸಂಖ್ಯಾ ಶಾಸ್ತ್ರಜ್ಞರು, ವಿಶ್ಲೇಷಕರ ಮೂಲಕ ಸೋಲು – ಗೆಲುವಿನ ಲೆಕ್ಕಾಚಾರದ ಕುರಿತು ಪ್ರಸಾರ ಮಾಡಬಾರದು ಎಂದು ಆಯೋಗ ತಿಳಿಸಿದೆ.
ಇದಕ್ಕೂ ಮುನ್ನ ಆಯೋಗವು ಇಂತಹ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಎಲೆಕ್ಟ್ರಾನಿಕ್ ಮತ್ತು ಮುದ್ರಣಗಳು ಮುಕ್ತ, ನ್ಯಾಯಸಮ್ಮತ ಚುನಾವಣೆಗಾಗಿ ಇಂಥಹ ಕಾರ್ಯಕ್ರಮ ಪ್ರಸಾರ ಮಾಡುವುದನ್ನು ತಡೆಯಬೇಕು, ಯಾವುದೇ ವ್ಯಕ್ತಿ ಯಾವುದೇ ಮಾದರಿಯಲ್ಲಿ ಮತಗಟ್ಟೆ ಸಮೀಕ್ಷೆ ನಡೆಸಬಾರದು.
ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಅದನ್ನು ಪ್ರಕಟಿಸಲು ಅಥವಾ ಪ್ರಚಾರ ಮಾಡಲು ಪ್ರಯತ್ನಿಸಬಾರದು ಎಂದು ಚುನಾವಣಾ ಆಯೋಗ ಘೋಷಿಸಿದೆ.
