ವಿಜಯಪುರ : ರಾಜ್ಯದಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಜನರು ಅಕ್ಷರಶಃ ನಲುಗಿ ಹೋಗುತ್ತಿದ್ದಾರೆ. ಉತ್ತರ ಕರ್ನಾಟಕ ಜನರ ಬದುಕಂತೂ ಹೇಳತೀರದಾಗಿದೆ.

ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿಯ ನಡುಗಡ್ಡೆಯಲ್ಲಿ 7 ಜನರು ಸಿಲುಕಿಕೊಂಡಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಹೀಗಾಗಿ ರಕ್ಷಣಾ ಕಾರ್ಯಕ್ಕೆ ಮುಂದಾಗಲಾಗಿದೆ. ಇದ್ದಿಲು ತಯಾರಿಸಲು ಬಂದಿದ್ದ, ಮಹಾರಾಷ್ಟ್ರದ ಈ 7 ಜನ ಡೋಣಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ಈ ಪೈಕಿ ಐವರು ಮಕ್ಕಳಿದ್ದಾರೆ. ಹೀಗಾಗಿ ಜಿಲ್ಲೆಯ ಜನರ ಕರಳು ಚುರ್ ಎನ್ನುತ್ತಿದೆ. 

ನದಿ ಪಾತ್ರದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಇವರು ಹೊರ ಬರಲು ಸಾಧ್ಯವಾಗದೆ ಸ್ಥಳೀಯ ಅಧಿಕಾರಿಗಳಿಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದಾರೆ. ಏಳು ಜನರನ್ನು ಕರೆ ತರಲು ಬೋಟ್ ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗುರುವಾರ ರಾತ್ರಿಯೇ ಸ್ಥಳಕ್ಕೆ ಎಸಿ ಬಲರಾಮ ಲಮಾಣಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೇ, ಇಂದು ಅವರನ್ನು ರಕ್ಷಿಸುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾಗಿ ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ವಿಪರೀತ ಮಳೆಯಿಂದಾಗಿ ಜನರು ದಿಕ್ಕು ಕಾಣದವರಂತಾಗಿದ್ದಾರೆ. 

Leave a Reply

Your email address will not be published. Required fields are marked *

You May Also Like

ರಾಯಚೂರು ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್!

ರಾಯಚೂರು: ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 434…

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆಗಿದೆ.

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಫೆ.24ರಿಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಫೆ.24 ರಿಂದ 26 ವರೆಗೆ ಗವಿಮಠದ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.