ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ವಿಫಲ – ಬರಲಿದೆ ಕೇಂದ್ರ ತಂಡ!

corona covid19 karnataka

taday corona update

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ರಾಜ್ಯದಲ್ಲಿ ಮಾತ್ರ ಇದರ ಪ್ರಭಾವ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡವು ರಾಜ್ಯಕ್ಕೆ ಆಗಮಿಸುತ್ತಿದೆ.

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೊರೊನಾ ವೈರಸ್ ನಿಯಂತ್ರಣ ಉಸ್ತುವಾರಿಗೆ ಕೇಂದ್ರ ಸರ್ಕಾರದ ವಿಶೇಷ ತಂಡ ಆಗಮಿಸುತ್ತಿದೆ.

ಸೋಂಕು ಹೆಚ್ಚಾಗುತ್ತಿರುವ ಕೇರಳ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಪ್ರತ್ಯೇಕ ತಜ್ಞರ ತಂಡಗಳನ್ನು ಕೇಂದ್ರ ಆರೋಗ್ಯ ಇಲಾಖೆ ನಿಯೋಜಿಸಿದೆ. ತಜ್ಞರ ತಂಡ ಕರ್ನಾಟಕಕ್ಕೆ ಎರಡನೇ ಬಾರಿಗೆ ಬರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ಮತ್ತು ಸಲಹೆಗಳನ್ನು ನೀಡಲಿದೆ.
ಕೇಂದ್ರದ ತಂಡದ ನಂತರ ರಾಜ್ಯದಲ್ಲಿ ಪರಿಸ್ಥಿತಿ ಸಂಪೂರ್ಣ ವಿಭಿನ್ನವಾಗಿದ್ದು ಕೈ ಮೀರಿ ಹೋಗುತ್ತಿದೆ. ಈ ಹಿನ್ನೆಲೆ ಮತ್ತೊಮ್ಮೆ ಕೇಂದ್ರ ಸರ್ಕಾರ ರಾಜ್ಯಕ್ಕೆ ತಜ್ಞರ ನಿಯೋಜನೆ ಮಾಡಿದೆ.

ರಾಜ್ಯದಲ್ಲಿ ಒಟ್ಟು 7,43,848 ಪ್ರಕರಣಗಳು ವರದಿಯಾಗಿವೆ. ಇದು ದೇಶದ ಒಟ್ಟು ಪ್ರಕರಣಗಳಲ್ಲಿ ಶೇ. 10.1ರಷ್ಟಿದೆ. ಕರ್ನಾಟಕವು ಪ್ರತಿ ಮಿಲಿಯನ್ ಜನಸಂಖ್ಯೆಗೆ 11,010 ಪ್ರಕರಣಗಳನ್ನು ಹೊಂದಿದೆ. ರಾಜ್ಯದಲ್ಲಿ 6,20,008 ರೋಗಿಗಳು ಗುಣಮುಖರಾಗಿದ್ದಾರೆ. ಚೇತರಿಕೆ ದರ ಶೇ. 83.35 ಆಗಿದೆ.

Exit mobile version