ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ. 

ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಹತ್ತಿರುವ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಕುರುಬ ಸಮುದಾಯದ ಜನರು ನಿರ್ಧರಿಸಿದ್ದರು. ಆದರೆ, ಸ್ಥಳದಲ್ಲಿ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಪಂಚಮ ಸಾಲಿ ಸಮುದಾಯ ಜನರು ನಿರ್ಧರಿಸಿದ್ದರು.

ಸದ್ಯ ಈ ವಿಷಯವಾಗಿಯೇ ಎರಡು ಸಮುದಾಯದ ನಡುವೆ ಜಗಳ ಪ್ರಾರಂಭವಾಗಿದೆ. ರಾತ್ರೋರಾತ್ರಿ ನಿರ್ಮಾಣವಾಗಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಇದರಿಂದ ರಾಯಣ್ಣ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಗುಂಪು ಚದುರಿಸಲು ಮುಂದಾಗಿದ್ದಾರೆ. ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ ಕೆಲ ಕಿಡಿಗೇಡಿಗಳು ಗದಗ ಎಸಿ ರಾಯಪ್ಪ ಹಾಗೂ ಡಿವೈಎಸ್ಪಿು ಪ್ರಹ್ಲಾದ್ ಅವರ ಎರಡು ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ.

ಈ ಕುರಿತು ಎರಡು ಸಮುದಾಯದ ಹಲವರನ್ನು ಬಂಧಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲ ಘಟನೆಗೆ ಸಚಿವ ಸಿ.ಸಿ. ಪಾಟೀಲ್ ಅವರೇ ಕಾರಣ ಎಂದು ಕುರುಬ ಸಮುದಾಯದವರು ವಾದಿಸುತ್ತಿದ್ದಾರೆ. ಹೀಗಾಗಿ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ಹೆಚ್ಚಳ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ…

ಬಿಪಿಎಲ್ ಕಾರ್ಡ್ ದಾರರು, ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ಇಂದಿನಿಂದ ಶ್ರೀ ಹೊಳಲಮ್ಮದೇವಿ ಜಾತ್ರೆ ಆರಂಭ

ತಾಲೂಕಿನ ಶ್ರೀಮಂತಗಡದ ಇತಿಹಾಸ ಪ್ರಸಿದ್ಧ ಹೊಳಲಮ್ಮದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಪ್ರಾರಂಭವಾಗುತ್ತಿದೆ. ಫೆ.27ರಂದು ರಥೋತ್ಸವ ಹಾಗೂ ಫೆ.28ರ ರವಿವಾರ ಸಂಜೆ 5ಕ್ಕೆ ಕಡುಬಿನ ಕಾಳಗ ಜರುಗುತ್ತದೆ.

ಹುಬ್ಬಳ್ಳಿ: 165 ಜನ ವೈದ್ಯಕೀಯ ಸಿಬ್ಬಂದಿಗೆ ಮೆತ್ತಿಕೊಂಡ ಸೋಂಕು!

ಹುಬ್ಬಳ್ಳಿ : ಕೊರೊನಾ ಅಟ್ಟಹಾಸದ ಮಧ್ಯೆ ವೈದ್ಯಕೀಯ ಸಿಬ್ಬಂದಿಗೆ ಮಹಾಮಾರಿಯ ಭಯ ಇನ್ನಷ್ಟು ಹೆಚ್ಚಾಗುತ್ತಿದೆ.