ಲಕ್ಷ್ಮೇಶ್ವರ: ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಅವರು ಲಕ್ಷ್ಮೇಶ್ವರ ಪಟ್ಟಣದ ಅಗಡಿ ಇಂಜಿನಿಯರಿಂಗ್ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ಸರ್ಕಾರವು ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ದೇಶವನ್ನು ಮುನ್ನಡೆಸಲು ಬಿಜೆಪಿ ಪಕ್ಷವು ಬಿಟ್ಟು ಬೇರೆ ಯಾವ ಪಕ್ಷವು ಕೆಲಸಮಾಡಲಾರವು. ನರೇಂದ್ರ ಮೋದಿ ಸರ್ಕಾರವು ದೇಶದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳ ತರುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಚುನಾವಣೆಯಲ್ಲಿ ನಾಡಿನ ಜನತೆ ನಮಗೆ ಆರ್ಶಿರ್ವಾದ ಮಾಡಿದ್ದಿರಿ. ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಬಾರಿಯು ಸಂಕನೂರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.

ಎರಡನೇ ಬಾರಿ ಚುನಾವಣೆ ಗೆ ಸ್ಪರ್ದಿಸುತ್ತಿರುವ ಸಂಕನೂರ ಅವರು ಹಿಂದಿನ ಚುನಾವಣೆಯಲ್ಲಿ 16000 ಮತಗಳಿಂದ ಗೆದ್ದಿದ್ದರು. ಈ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚಿನ ಮತದಿಂದ ಗೆಲ್ಲುವ ವಿಶ್ವಾಸವಿದೆ. ಬಿಜೆಪಿ‌ ಸರ್ಕಾರವು ದೇಶದ ಸೈನಿಕರಿಗೆ ಬಲತುಂಬುವ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅವುಗಳನ್ನು ಟೀಕೆ ಮಾಡುತ್ತ ಜನರನ್ನು ದಿಕ್ಕುತಪ್ಪಿಸುವ ಕೆಲಸಮಾಡುತ್ತಿದೆ. ಎಪಿಎಂಸಿ ಕಾಯ್ದೆಯನ್ನು ಸ್ವೀಕರಿಸದ ವಿರೋಧ ಪಕ್ಷಗಳು ರೈತರನ್ನು ಅಧೋಗತಿಗೆ ತಳ್ಳುವ ಕೆಲಸ ಮಾಡುತ್ತಿವೆ. ಆದ್ದರಿಂದ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮಾತಿಗೆ ಮರಳಾಗದೆ ಅವರನ್ನು ತಿರಸ್ಕರಿಸಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಬೇಕು ಎಂದರು.

ಸಂದರ್ಭದಲ್ಲಿ ಶಾಸಕ ರಾಮಣ್ಣ ಲಮಾಣಿ, ಪ್ರದೀಪ್ ಶೆಟ್ಟರ್, ಅಭ್ಯರ್ಥಿ ಎಸ್.ವಿ.ಸಂಕನೂರ, ಮಾಂತೇಶ ಟೆಂಗಿನಕಾಯಿ, ನಿಂಗರಾಜ ಪಾಟೀಲ್, ವಿಜಯಕುಮಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…

ನಾಡಪ್ರಭು ವಿಮಾನ ನಿಲ್ದಾಣದ ಟರ್ಮಿನಲ್‌–2 ಉದ್ಘಾಟಿಸಿದ ಮೋದಿ

ಉತ್ತರಪ್ರಭ ಸುದ್ದಿ ಬೆಂಗಳೂರ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು…

ಗೃಹ ರಕ್ಷಕ ದಳದ ಸದಸ್ಯ ಸ್ಥಾನಗಳ ನೋಂದಣಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಗ್ರಾಮ ಪಂಚಾಯತಿಗಳಿಗೆ ನೇಮಕವಾದ ಆಡಳಿತಾಧಿಕಾರಿಗಳ ಕರ್ತವ್ಯಗಳೇನು..?

ನೇಮಕಗೊಂಡ ಆಡಳಿತಾಧಿಕಾರಿಗಳ ಕರ್ತವ್ಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.