ಶಿರಹಟ್ಟಿ: ತಾಲೂಕಿನ ಹೆಬ್ಬಾಳ ಗ್ರಾಮದ ಜನರ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಶನಿವಾರ ಹೆಬ್ಬಾಳ ಗ್ರಾಪಂ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ವಡವಿ ಮಾತನಾಡಿ, ತಾಲೂಕಿನ ದೊಡ್ಡ ಗ್ರಾಮಗಳಲ್ಲಿ ಒಂದಾದ ಹೆಬ್ಬಾಳ ಗ್ರಾಮದ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಚಗೊಳಿಸದೆ ಗಬ್ಬೆದ್ದು ನಾರುತ್ತಿವೆ ಎಂದರು.

ಗ್ರಾಮದ ಕೆಲವು ವಾರ್ಡ್ ಗಳಿಗೆ ವಿದ್ಯುತ್ ದೀಪದ ಸೌಲಭ್ಯವಿಲ್ಲ. ಇದರಿಂದ‌ ಮಕ್ಕಳಿಗೆ ಹಾಗೂ ವೃದ್ದರಿಗೆ ರಾತ್ರಿವೇಳೆಯಲ್ಲಿ ಸಂಚಾರ ಮಾಡುವುದಕ್ಕೆ ತೊಂದರೆಯಾಗುತ್ತಿದೆ. ಕುಡಿಯುವ ನೀರಿನ ವ್ಯವಸ್ಥೆ ಗ್ರಾಮದ ಎಲ್ಲಾ ವಾರ್ಡಗಳಿಗೆ ಹಂಚಿಕೆಯಾಗಬೇಕು. ಆಶ್ರಯ ಮನೆಯ ಸಮಸ್ಯೆ ಕೊನೆಯಾಗಬೇಕು. ಉದ್ಯೋಗ ಖಾತ್ರಿ ಯೋಜನೆ ಗ್ರಾಮದಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಬೇಕು ಎಂದು ಒತ್ತಾಯಿಸಿದರು.

ಎಲ್ಲಾ ಬೇಡಿಕೆಗಳನ್ನು ವಾರದಲ್ಲಿ ಈಡೇರಿಸಬೇಕು. ಇಲ್ಲವಾದರೆ ತಾಲೂಕು ಪಂಚಾಯತಿ ಎದರು ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶರಣಪ್ಪ ಪುರ್ತಗೇರಿ, ದೇವೇಂದ್ರ ಶಿಂದೆ, ದೇವರಾಜ ಮೇಟಿ, ಸಂತೋಷ ಹಿರೇಮಠ ಹಾಗೂ ಕರವೇ ಗ್ರಾಮ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…

ಜಿಲ್ಲೆಯಲ್ಲಿ ಧಾರ್ಮಿಕ ಹಬ್ಬಗಳನ್ನು ನಿರ್ಭಂದಿಸಿ ಜಿಲ್ಲಾಡಳಿತ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.