ದೇಶದ ಜನತೆಗೆ ಶುಭಾಶಯ ಕೋರಿದ ಮೋದಿ!

ನವದೆಹಲಿ : ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ನೀಡಲಿ. ಜೈ ಮಾತಾ ಕೀ! ಎಂದು ಬರೆದುಕೊಂಡಿದ್ದಾರೆ. 

ಇನ್ನೊಂದು ಟ್ವೀಟ್ ಮಾಡಿರುವ ಅವರು, ನವರಾತ್ರಿಯ ಮೊದನ ದಿನ ನಾವು ಶೈಲ ಪುತ್ರಿಯನ್ನು ಆರಾಧನೆ ಮಾಡುತ್ತೇವೆ ಎಂದು ಹೇಳುವ ಮೂಲಕ ಶೈಲಪುತ್ರಿಗೆ ಸಂಬಂಧಿಸಿದ ಸ್ತುತಿಯನ್ನು ಶೇರ್ ಮಾಡಿದ್ದಾರೆ. 

ನವರಾತ್ರಿಯ ಮೊದಲ ದಿನ ಶೈಲಪುತ್ರಿಗೆ ಸಂಬಂಧಿಸಿದ್ದಾಗಿದ್ದು, ಮಾ ಶೈಲಪುತ್ರಿಗೆ ಪ್ರಣಾಮಗಳು. ತಾಯಿಯ ಆಶೀರ್ವಾದದಿಂದ, ನಮ್ಮ ಗ್ರಹವು ಸುರಕ್ಷಿತವಾಗಿ, ಆರೋಗ್ಯಕರವಾಗಿ ಮತ್ತು ಸಮೃದ್ಧವಾಗಿರಲಿ ಎಂದು ಬೇಡಿಕೊಂಡಿದ್ದಾರೆ.

ಬಡ ಮತ್ತು ದೀನ ದಲಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ನಮಗೆ ಶಕ್ತಿಯನ್ನು ನೀಡಲಿ ಎಂದು ತಿಳಿಸಿದ್ದಾರೆ.

Exit mobile version