ನವದೆಹಲಿ : ದೇಶದಲ್ಲಿ ಇಲ್ಲಿಯವರೆಗೂ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತ ಆತಂಕ ಮೂಡಿಸಿದ್ದ ಮಹಾಮಾರಿ, ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದ್ದು, ಜನರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದೆ.

ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 74 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ ಒಂದೂವರೆ ತಿಂಗಳ ನಂತರ ಇದೇ ಮೊದಲು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಸೋಂಕಿತ ಪ್ರಕರಣಗಳಲ್ಲಿ ಕೇವಲ ಶೇ. 10.70ರಷ್ಟು ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 62,212 ಜನರಲ್ಲಿ ಸೋಂಕು ಪತ್ತೆಯಾಗಿದೆ. 837 ಜನ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74,32,681ಕ್ಕೆ ಹೆಚ್ಚಳವಾಗಿದೆ. ಇದರಲ್ಲಿ 7,95,087 ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಪ್ರಕರಣಗಳ ಪೈಕಿ ಶೇ. 79ರಷ್ಟು ಪ್ರಕರಣಗಳು ಕೇವಲ 10 ರಾಜ್ಯಗಳಲ್ಲಿ ಮಾತ್ರ ಕಂಡು ಬಂದಿದೆ.

70,816 ಜನ ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಒಟ್ಟು 65,24,595 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರಲ್ಲಿ ಶೇ.78ರಷ್ಟು ಜನ 10 ರಾಜ್ಯಗಳಲ್ಲಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕಳೆದ 24 ಗಂಟೆಗಳಲ್ಲಿ 65,24,596 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, 837 ಜನ ಬಲಿಯಾಗಿದ್ದಾರೆ. ಶೇ.82ರಷ್ಟು ಜನ ಕೇವಲ 10 ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ಕೊರೊನಾಗೆ ಬಲಿಯಾದವರ ಒಟ್ಟು ಸಂಖ್ಯೆ 1,12,998ಕ್ಕೆ ಏರಿದೆ.

Leave a Reply

Your email address will not be published. Required fields are marked *

You May Also Like

ಐಪಿಎಲ್ ಬೆಟ್ಟಿಂಗ್ ಇಬ್ಬರ ಬಂಧನ!

ಬೆಂಗಳೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಇಬ್ಬರು ಬುಕ್ಕಿಗಳನ್ನು ವಶಕ್ಕೆ ಪಡೆದಿದ್ದಾರೆ.

ವೃದ್ಧರಿಗೆ ಬಿಸಿಯೂಟ ನೀಡಲು ಮುಂದಾದ ಕೇಂದ್ರ ಸರ್ಕಾರ

ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ದೇಶದಲ್ಲಿ 11,458 ಹೊಸ ಕೊರೊನಾ ಪ್ರಕರಣ: 3 ಲಕ್ಷ ದಾಟಿದ ಸೋಂಕಿತರು

ದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ 10…