ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಅಲ್ಲದೇ, ರೂ. 4,851 ಕೋಟಿಯಷ್ಟು ಮೂಲ ಸೌಲಭ್ಯಕ್ಕೆ ಹಾನಿಯಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಜನರಿಂದ ದೂರು ಬಾರದಂತೆ ಪರಿಹಾರ ಕಲ್ಪಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಪ್ರವಾಹ ಪೀಡಿತ ಗ್ರಾಮಗಳನ್ನೇ ಸ್ಥಳಾಂತರಿಸಲಾಗಿದೆ. ರಾಜ್ಯದ 51,810 ರೈತರಿಗೆ ಬೆಳೆ ಪರಿಹಾರವಾಗಿ ರೂ.36.57 ಕೋಟಿ ಮೊತ್ತವನ್ನು ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.  

ಪ್ರವಾಹದಿಂದಾಗಿ 10.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ ರೂ.9,952 ಕೋಟಿ ನಷ್ಟ ಎದುರಾಗಿದೆ. ಉತ್ತರ ಕರ್ನಾಟಕದಲ್ಲಿನ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರಕ್ಕೆ ಸೂಚಿಸಲಾಗಿದೆ. ಸರ್ಕಾರ ಯಾವುದೇ ಸಂದರ್ಭದಲ್ಲಿಯೂ ಪ್ರವಾಹ ಪರಿಸ್ಥಿತಿಯನ್ನು ನಿರ್ಲಕ್ಷಿಸದೆ ಸ್ಪಂದಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ಮುಖಕ್ಕೆ ಮಾಸ್ಕ ಧರಿಸದಿದ್ದರೆ 250 ರೂ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಧರಿಸದೆ ಇರುವದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 250 ರೂ, ದಂಡ.

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.